ತುಮಕೂರು, ಏ. ೧- ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡಿ ಅವರ ಬದುಕಿಗೆ ಬೆಳಕಾಗಿದ್ದ ಕಾಯಕ ಯೋಗಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ನಾಡಿನ ಉದ್ದಗಲಕ್ಕೂ ಹೆಸರುವಾಸಿಯಾಗಿದ್ದ ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೬ನೇ ಜನ್ಮ ಜಯಂತಿ ಹಾಗೂ ಗುರುವಂದನಾ ಮಹೋತ್ಸವವನ್ನು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಡಗರ ಸಂಭ್ರಮದಿAದ ಆಚರಿಸಲಾಯಿತು.

೧೨ನೇ ಶತಮಾನದ ಬಸವಣ್ಣನವರ ತತ್ವಾದರ್ಶಗಳನ್ನು ಚಾಚೂ ತಪ್ಪದೇ ಪಾಲನೆ ಮಾಡುತ್ತಾ ಸಮಾಜದ ಉದ್ಧಾರಕ್ಕೆ ಸದಾ ತುಡಿಯುತ್ತಿದ್ದ ಆಧುನಿಕ ಬಸವಣ್ಣ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೬ನೇ ಜಯಂತಿಗೆ ವಿವಿಧ ಮಠಾಧೀಶರು, ಹರಗುರುಚರಮೂರ್ತಿಗಳು, ಗಣ್ಯಾತಿ ಗಣ್ಯರು ಹಾಗೂ ಲಕ್ಷಾಂತರ ಭಕ್ತರು ಸಾಕ್ಷಿಯಾದರು.
ನಾಡಿನ ಭಕ್ತಾದಿಗಳ ಮನ ಮನೆಗಳ ದೈವೀ ಪ್ರಭೆಯಾಗಿದ್ದ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಐಕ್ಯರಾಗಿರುವ ಶಿವಯೋಗಿ ಮಂದಿರದ ಗದ್ದುಗೆಯಲ್ಲಿ ಮುಂಜಾನೆಯಿAದಲೇ ಧಾರ್ಮಿಕ ವಿಧಿ ವಿಧಾನಗಳು, ಅಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ, ಭಜನಾ ಮಂತ್ರ ಘೋಷಗಳು ಮೊಳಗಿದವು.
ಕಳಸ ಸ್ಥಾಪನೆ
ಶ್ರೀಗಳ ೧೧೬ನೇ ಜಯಂತಿ ವಿಶೇಷವಾಗಿ ನಸುಕಿನಲ್ಲೇ ಶ್ರೀಕ್ಷೇತ್ರದ ಬೆಟ್ಟದ ಮೇಲೆ ಪುನರ್ ನಿರ್ಮಾಣಗೊಂಡಿರುವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ದೇವಸ್ಥಾನದ ವಿಮಾನ ಗೋಪುರದ ಮೇಲೆ ಕಳಸ ಸ್ಥಾಪನೆ ಮಾಡಲಾಯಿತು.
ಕಳಸ ಸ್ಥಾಪನೆ ಬಳಿಕ ಶ್ರೀಗಳ ಗದ್ದುಗೆಗೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಹರಗುರುಚರಮೂರ್ತಿಗಳ ಸಮ್ಮುಖದಲ್ಲಿ ರುದ್ರಾಭಿಷೇಕ, ೧೦೮ ಅಷ್ಟೋತ್ತರ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ, ಮಹಾಮಂಗಳಾರತಿ ನೆರವೇರಿತು.
ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಪರಮಪೂಜ್ಯರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸುವ ಮೂಲಕ ಆಶೀರ್ವಾದ ಪಡೆದರು. ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ವಿವಿಧ ಬಗೆಯ ಪುಷ್ಪಗಳಿಂದ ಅಲಂಕರಿಸಿದ್ದ ಗದ್ದುಗೆಗೆ ಪುಷ್ಪ ನಮನ ಸಲ್ಲಿಸಿ ಭಕ್ತಿ ಸಮರ್ಪಿಸಿದರು.
ಕಂಚಿನ ಪುತ್ಥಳಿ ಮೆರವಣಿಗೆ
ಗದ್ದುಗೆ ಮಂದಿರದ ಮುಂಭಾಗದಿAದ ಆರಂಭವಾದ ಶ್ರೀಗಳ ಕಂಚಿನ ಪುತ್ಥಳಿ ಹೊತ್ತ ರುದ್ರಾಕ್ಷಿ ಮಂಟಪದ ಮೆರವಣಿಗೆಗೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಮೆರವಣಿಗೆಯುದ್ಧಕ್ಕೂ ನಂದಿಧ್ವಜ ಕುಣಿತ, ಕರಡಿ ವಾದ್ಯ, ಡೋಲು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳ



