ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್, ಸ್ಥಳೀಯ ಸಂಸ್ಥೆ, ತುಮಕೂರು ವತಿಯಿಂದ ಶ್ರೀ ಸಿದ್ಧಗಂಗಾ ಮಠದ ಅಂಧ ಮಕ್ಕಳ ಪಾಠಶಾಲೆಯ ಆವರಣದಲ್ಲಿ ತಾಲ್ಲೂಕು ಮಟ್ಟದ ಗೀತಾಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಸ್ಥಳೀಯ ಸಂಸ್ಥೆ ಅಧ್ಯಕ್ಷರಾದ ಉಪ್ಪಾರಹಳ್ಳಿ ಕುಮಾರ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಗೆ ಅಭಿನಂದನಾ ಪತ್ರವನ್ನು ನೀಡಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಾನಿಕ ಆಯುಕ್ತರಾದ ಈಶ್ವರಯ್ಯ, ರೂಪ, ನಂದಿನಿ, ನವೀನ್, ದಯಾನಂದ್, ಚಂದ್ರಶೇಖರ್ ಸೇರಿದಂತ ಇತರರು ಭಾಗವಹಿಸಿದ್ದರು.