ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಸ್ಲಂ ಜನರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ
ಡಿಸೆಂಬರ್ 15 ಬೆಳಗಾವಿಯಲ್ಲಿ sjk ಪ್ರತಿಟಿಭಟನಾ ಸಭೆ
ಇಂದು ಸ್ಲಂ ಜನಾಂದೋಲನ- ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ವತಿಯಿಂದ ಬೆಳಗಾವಿ ಅಧಿವೇಶನದಲ್ಲಿ ಸ್ಲಂ ನಿವಾಸಿಗಳ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನಾ ಸಭೆ ಸಂಬಂಧ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಯಿತು. ಕುರಿತು ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಸಾವಿತ್ರಿ ಬಾಪುಲೆ ಮಹಿಳಾ ಸಂಘಟನೆಯ ಸಂಚಾಲಕರಾದ ಅನುಪಮಾ ಬೆಳಗಾವಿಲ್ಲಿ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಸ್ಲಂ ನಿವಾಸಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಡಿಸೆಂಬರ್ 15ರಂದು ಸ್ಲಂ ಜನಾಂದೋಲನ ಕನರ್ಾಟಕದಿಂದ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಕನ್ನಡ ಭವನದಲ್ಲಿ ರಾಜ್ಯ ಮಟ್ಟದ ಪ್ರತಿಭಟನಾ ಸಭೆಗೆ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ 500ಕ್ಕೂ ಹೆಚ್ಚು ಸ್ಲಂ ನಿವಾಸಿಗಳು ಭಾಗವಹಿಸುವಂತೆ ಜಿಲ್ಲಾ ಮಟ್ಟದ ಸ್ಲಂ ನಿವಾಸಿಗಳ ಸಭೆಯಲ್ಲಿ ಕರೆ ನೀಡಲಾಗಿದೆ, ಸ್ಲಂ ನಿವಾಸಿಗಳ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ತುರ್ತು ಗಮನಹರಿಸಲಿ, ಪ್ರಣಾಳಿಕೆಯಲ್ಲಿ ನುಡಿದಂತೆ ರಾಜ್ಯ ಸರ್ಕಾರ ನಡೆಯಲಿ ಎಂದು ಒತ್ತಾಯಿಸಿದರು.
ನಂತರ ಸ್ಲಂ ಸಮಿತಿಯ ಅರುಣ್ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜನರ ಆಹ್ವಾಲುಗಳು ಸ್ವೀಕರಿಸುತ್ತಿರುವುದು ಅಭಿನಂದನೀಯ, ಆದರೆ ಮನವಿಗಳಿಗೆ ಸೂಕ್ತ ಪರಿಹಾರ ನೀಡುತ್ತಿಲ್ಲ, ಅದಿವೇಶನ ಜನರ ದಿಕ್ಕು ತಪ್ಪಿಸದೇ ಹುಸಿ ಭರವಸೆಗಳಿಗೆ ಸೀಮಿತವಾಗದೆ, ರಾಜ್ಯದ ಜನರಿಗೆ ಜನಪರವಾದ ಮತ್ತು ಸಂವಿಧಾನದ ಸಮಪಾಲು ಆಶಯವನ್ನು ಸರ್ಕಾರ ಸರ್ವರಿಗೂ ತಲುಪಿಸುವಂತಾಗಲಿ, ರಾಜ್ಯದ ಸ್ಲಂ ನಿವಾಸಿಗಳಿಗೆ ವಸತಿ, ಹಕ್ಕುಪತ್ರ, ಭೂಮಿಹಕ್ಕು ನೀಡಬೇಕು ಹಾಗೂ ಖಾಸಗಿ ಒಡೆತನದಲ್ಲಿರುವ 705 ಸ್ಲಂಗಳ ಘೋಷಣೆಗೆ ತೊಡಕಾಗಿರುವ ಸುತ್ತೋಲೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸ್ಲಂ ಸಮಿತಿಯ ಪದಾಧಿಕಾರಿಗಳಾದ ತಿರುಮಲಯ್ಯ, ಶಂಕ್ರಯ್ಯ, ಕಣ್ಣನ್, ಕೃಷ್ಣಮೂರ್ತಿ, ಧನಂಜಯ್, ಮುಬಾರಕ್, ಕೆಂಪಣ್ಣ, ಮುರುಗನ್, ಸಾವಿತ್ರಿ ಬಾಪೂಲೆ ಮಹಿಳಾ ಸಂಘಟನೆಯ ಪದಾಧಿಕಾರಿಗಳಾದ ಪೂರ್ಣಿಮಾ, ವಸಂತಮ್ಮ, ಗಂಗಮ್ಮ, ಸುಹೇಲ್ ಜಾಬೀರ್ಖಾನ್ ಮುಂತಾದವರು ಪಾಲ್ಗೊಂಡಿದ್ದರು.



