ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್, ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಸಂಘ-ಸAಸ್ಥೆಗಳ ಸಹಯೋಗದೊಂದಿಗೆ ಇಂದು ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಮಹಾನಗರ ಪಾಲಿಕೆ ಆವರಣದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯವರೆಗೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರು ವಿಳ್ಯದೆಲೆ ಹಾಗೂ ಗುಟ್ಕಾ ಸೇವನೆಯಿಂದ ಆರೋಗ್ಯದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದರಲ್ಲದೆ, ಯುವಜನರಲ್ಲಿ ಇದರಿಂದ ಸಂಭವಿಸಬಹುದಾದ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಿ ಆರೋಗ್ಯ ಯುತ ಹಾಗೂ ಸ್ವಾಸ್ಥö್ಯ ಸಮಾಜವನ್ನು ನಿರ್ಮಾಣ ಮಾಡೋಣವೆಂದು ತಿಳಿಸಿದರು.
ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳು ಮೊದಲು ತಮ್ಮ ಮನೆಗಳಲ್ಲಿ ಅರಿವು ಮೂಡಿಸಬೇಕು. ನಂತರ ನೆರೆಹೊರೆಯ ಜನರಿಗೂ ತಂಬಾಕು ಸೇವಿಸುವುದರಿಂದ ಸಂಭವಿಸುವ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದರ ಮೂಲಕ ತಂಬಾಕು ಮುಕ್ತ ಸಮಾಜವನ್ನು ನಿರ್ಮಾಣ ಮಾಡಲು ಸಹಕರಿಸಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮಂಜುನಾಥ್ ಮಾತನಾಡಿ, ತಂಬಾಕು ಸೇವನೆಯಿಂದ ಪ್ರತಿ ವರ್ಷ ಸುಮಾರು ೫ ಲಕ್ಷ ಜನ ಮರಣ ಹೊಂದುತ್ತಿದ್ದಾರೆ. ತಂಬಾಕು, ಗುಟ್ಕಾ, ಪಾನ್ ಮಸಾಲ ಸೇವನೆಯಿಂದ ಬಾಯಿ, ನಾಲಿಗೆ, ಕರುಳು ಹಾಗೂ ಶ್ವಾಸಕೋಶ ಕ್ಯಾನ್ಸರ್ ಸಂಭವಿಸುತ್ತದೆ. ಒಂದು ಸಿಗರೇಟ್ ಸೇವನೆ ಮಾಡಿದರೆ ೧೧ ದಿನಗಳ ಆಯಸ್ಸು ಕಡಿಮೆಯಾಗುತ್ತದೆ. ತಂಬಾಕು ಮತ್ತು ಅದರ ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ತಂಬಾಕು ನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ: ಆರ್.ವಿ.ಮೋಹನ್ದಾಸ್ ಪ್ರಾಸ್ತಾವಿಕವಾಗಿ ಮಾತನಾಡಿ, ತಂಬಾಕು ಉತ್ಪಾದನೆಯಿಂದ ಪರಿಸರದ ಮೇಲೆ ಆಗುವ ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ರೈತರು ತಂಬಾಕು ಬೆಳೆಗೆ ಪರ್ಯಾಯವಾಗಿ ಬೇರೆ ಬೆಳೆಯನ್ನು ಬೆಳೆಯುವ ಹಾಗೆ ಅರಿವು ಮೂಡಿಸಬೇಕು. “ಆಹಾರ ಬೇಕು ತಂಬಾಕು ಅಲ್ಲ” ಎಂಬುವುದು ಈ ವರ್ಷದ ಘೋಷ ವಾಕ್ಯವಾಗಿದೆ.
ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ – ನೂರುನ್ನೀಸ
ತುಮಕೂರು(ಕ.ವಾ.) ಮೇ.೩೧: ಯುವ ಜನರು ವಿವಿಧ ರೀತಿಯಲ್ಲಿ ಹೆಚ್ಚಾಗಿ ತಂಬಾಕು ಸೇವಿಸಿ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಹಾಗೂ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಹೇಳಿದರು.