ತುಮಕೂರಿನ ಟೌನ್ಹಾಲ್ ವೃತ್ತದಲ್ಲಿ ಪಾಲಿಕೆ ಸದಸ್ಯ ಜೆ. ಕುಮಾರ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಶ್ರೀರಾಮನವಮಿ ಆಚರಣೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಶ್ರೀರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು. ಮಾಜಿ ಮೇಯರ್ ಪ್ರಭಾವತಿ ಸುಧೀಶ್ವರ್, ಮಹೇಶ್, ಮೆಹಬೂಬ್ ಪಾಷ, ಜಿಯಾವುಲ್ಲಾಖಾನ್, ಸೈಯದ್ ಇಸ್ಮಾಯಿಲ್, ಉಬೇದುಲ್ಲಾ, ನಟರಾಜು ಮತ್ತಿತರರು ಭಾಗವಹಿಸಿದ್ದರು.