ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು : “ಸಾಧನಾ ಅಶೋಕ್ ಪೋಟೆ” ನುಡಿ
ತುಮಕೂರು:
ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಯಾವ ರೀತಿ ಪ್ರಾಮುಖ್ಯತೆ ನೀಡಬೇಕಾಗುತ್ತದೆ, ಅಲ್ಲದೇ ಮಾನವೀಯ ಮೌಲ್ಯಗಳು ಯಾವ ರೀತಿಯಲ್ಲಿ ಬೆಳೆಸಿಕೊಳ್ಳಬೇಕು, ಇಂದಿನ ದಿನಗಳಲ್ಲಿ ತಂದೆ- ತಾಯಿಗಳಲ್ಲಿ ಕನಸ್ಸನ್ನು ಕಾಣುವುದು ಅದನ್ನು ವಿದ್ಯಾರ್ಥಿಗಳು ನಿಜ ಮಾಡಬೇಕು ಹಾಗೂ ವಿದ್ಯಾರ್ಥಿಗಳ ಜೀವನದಲ್ಲಿ ಮುಖ್ಯವಾಗಿ ಜೀವನ ಶೈಲಿಯನ್ನು ಬೆಳೆಸಿಕೊಳ್ಳಬೇಕು ಹಾಗೂ ಪ್ರತಿಯೊಬ್ಬ ವಿದ್ಯಾರ್ಥಿಯೂ ಕೌಶಲ್ಯ ಹಾಗೂ ಸೌಜನ್ಯವನ್ನು ಬಳಸಿಕೊಳ್ಳಬೇಕು ಎಂದು ಬೆಂಗಳೂರಿನ ಕೌಶಲ್ಯ ಭವನದ ಜಂಟಿ ನಿರ್ದೇಶಕಿಯಾದ ಸಾಧನಾ ಅಶೋಕ್ ಪೋಟೆರವರು ತಿಳಿಸಿದರು.
ನಗರದ ಶಿರಾರಸ್ತೆಯ ಶ್ರೀದೇವಿ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ ಶ್ರೀಸಂಭ್ರಮ ವಾರ್ಷಿಕೋತ್ಸವ-೨೦೨೩ ಕಾರ್ಯಕ್ರಮವನ್ನು ಜೂನ್ ೮ ರಂದು ಗುರುವಾರ ಬೆಳಿಗ್ಗೆ ೧೧ ಗಂಟೆಗೆ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಅವರು ವೃತ್ತಿ ಜೀವನದಲ್ಲಿ ಪ್ರತಿಯೊಬ್ಬರು ವಿದ್ಯಾರ್ಥಿಯೂ ಮಾನವೀಯ ಮೌಲ್ಯಗಳು ಮತ್ತು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ತುಮಕೂರಿನ ಜಿಲ್ಲಾ ಕೌಶಲ್ಯಾಭಿವೃದ್ಧಿ ಉಪನಿರ್ದೇಶಕರಾದ ವಿಶ್ವೇಶ್ವರಯ್ಯರವರು ಮಾತನಾಡುತ್ತಾ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಕೌಶಲ್ಯ, ಶ್ರದ್ದೆ, ಸಮಯಪ್ರಜ್ಞೆ ಇತ್ಯಾದಿಗಳ ಮೂಲಕ ಯಶಸ್ಸುನ್ನು ಸಾಧಿಸಬಹುದು. ಉತ್ತಮ ಫಲಿತಾಂಶ ಪಡೆದವರು ಉದ್ಯೋಗವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಿಂದರೆ ವಿಶೇಷ ಶಕ್ತಿ ಚೈತನ್ಯವಿದ್ದಂತೆ ಹಾಗೂ ವಿದ್ಯಾರ್ಥಿಗಳ ಉತ್ತಮ ವಿದ್ಯಾಭ್ಯಾಸ ಮಾಡಿದರೆ ಉತ್ತಮ ಜೀವನದ ಶಿಖರಕ್ಕೆ ಏರಬಹುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್ರವರು ಮಾತನಾಡುತ್ತಾ ಪಾಲಿಟೆಕ್ನಿಕ್ ಕೋರ್ಸ್ ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶದ ಬಗ್ಗೆ ವಿವರಿಸುತ್ತಾ, ವಿದ್ಯಾರ್ಥಿಗಳಿಗೆ ಸಮಯ ಪ್ರಜ್ಞೆ, ಕರ್ತವ್ಯ ಪ್ರಜ್ಞೆಯನ್ನು ಬಗ್ಗೆ ಸ್ವವಿವರವಾಗಿ ವಿವರಿಸಿದರು. ವಿದ್ಯಾರ್ಥಿಗಳ ಜೀವನದಲ್ಲಿ ಬರುವ ತಂದೆ-ತಾಯಿಗಳು, ಗುರುಗಳ ಬಗ್ಗೆ ಪ್ರೀತಿ ವಿಶ್ವಾಸವನ್ನು ನೋಡಿಕೊಳ್ಳಬೇಕು ಎಂದು ವಿವರಿಸಿದರು.