ವೈದ್ಯಕೀಯ ಕ್ಷೇತ್ರದಲ್ಲಿ ಮತ್ತು ಸಂಬoಧಿತ ವಿಷಯಗಳಲ್ಲಿ ಹೊಸ ಮತ್ತು ಅಭಿವೃದ್ಧಿಶೀಲ ಕ್ಷೇತ್ರಗಳ ಬಗ್ಗೆ ತಿಳಿಯಲು, ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರ ಶಿಕ್ಷಣ ಕುರಿತ ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರ ನಗರದ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನ ಯಶಸ್ವಿಯಾಗಿ ನಡೆಯಿತು.
ಅಗಳಕೋಟೆಯಲ್ಲಿರುವ ಕಾಲೇಜಿನ ನಾಗಾರ್ಜುನ ಸಭಾಂಗಣದಲ್ಲಿ ಏರ್ಪಟ್ಟ ಕಾರ್ಯಾಗಾರವನ್ನು ಸಾಹೇ ವಿಶ್ವವಿದ್ಯಾಲಯದ ಕುಲಸಚಿವ ಡಾ.ಎಂ.ಝಡ್.ಕುರಿಯನ್ ಉದ್ಘಾಟಿಸಿ, ವೈದ್ಯರು ಬಳಸುವ ಜ್ಞಾನ, ಕೌಶಲ್ಯಗಳು ಮತ್ತು ವೃತ್ತಿಪರ ಕಾರ್ಯಕ್ಷಮತೆ ಮತ್ತು ಸಂಬoಧಗಳನ್ನು ನಿರ್ವಹಿಸಲು, ಅಭಿವೃದ್ಧಿಪಡಿಸಲು ಶೈಕ್ಷಣಿಕ ಚಟುವಟಿಕೆಗಳನ್ನು ಒಳಗೊಂಡ ನಿರಂತರ ಶಿಕ್ಷಣ ಕಲಿಕೆ ಕಾರ್ಯಕ್ರಮಗಳು ಇಂದಿನ ದಿನದಲ್ಲಿ ಮಹತ್ವಪೂರ್ಣವಾಗಿವೆ ಎಂದರು.
ಪ್ರಾoಶುಪಾಲ ಡಾ.ಎಂ.ಬಿ.ಸಾಣಿಕೊಪ್ಪ ಮಾತನಾಡಿ, ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ (ಅಒಇ) ನಿರಂತರ ಶಿಕ್ಷಣ ಕಲಿಕೆ ಕಾರ್ಯಕ್ರಮ ವೈದ್ಯಕೀಯ ಕ್ಷೇತ್ರದಲ್ಲಿನ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಮತ್ತು ಅವರ ಕ್ಷೇತ್ರದ ಹೊಸ ಮತ್ತು ಅಭಿವೃದ್ಧಿಶೀಲ ಕ್ಷೇತ್ರಗಳ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುತ್ತದೆ ಎಂದರು.
ಪರೀಕ್ಷಾ ನಿಯಂತ್ರಕ ಡಾ.ಗುರುಶಂಕರ್, ಉಪಪ್ರಾಂಶುಪಾಲ ಡಾ.ಪ್ರಭಾಕರ ಜಿ.ಎನ್., ಮುಖ್ಯ ಆಡಳಿತಾಧಿಕಾರಿ ಡಾ.ಕಿರಣ್ ಕುಮಾರ್, ವೈದ್ಯಕೀಯ ಅಧೀಕ್ಷಕ ಡಾ.ವೆಂಕಟೇಶ ಜಿ.ಎನ್ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದರು.
ಅಂಗರಚನಾಶಾ ವಿಭಾಗ ಮುಖ್ಯಸ್ಥರು ಹಾಗೂ ಕಾರ್ಯಾಗಾರದ ಸಂಘಟನಾ ಅಧ್ಯಕ್ಷೆ ಪ್ರೊ. ಕಾವ್ಯಶ್ರೀ ಎ ಎನ್, ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಾಗಾರದ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು.
ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯಲ್ಲಿ ‘ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರ ಶಿಕ್ಷಣ’ ಕುರಿತ ರಾಜ್ಯ ಮಟ್ಟದ ಕಾರ್ಯಾಗಾರ
Leave a comment
Leave a comment