ಅಫಜಲಪುರ, ಅ.17 : ತಾಲ್ಲೂಕಿನ ದೇವಲಗಾಣಗಾಪುರದಲ್ಲಿ ನಡೆದ ದುರ್ಘಟನೆಯಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.ಮೃತಳಾದ ಶ್ರೀದೇವಿ ಟಾಕಳಿ (15) ಅವರು ದೇವಲಗಾಣಗಾಪುರ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕುಟುಂಬದವರು ತೋಟದಲ್ಲಿ ಮನೆ ಮಾಡಿ ನೆಲೆಸಿದ್ದು, ಬುಧವಾರ ರಾತ್ರಿ ಮೂತ್ರ ವಿಸರ್ಜನೆಗಾಗಿ ಮನೆಯಿಂದ ಹೊರಗೆ ಹೋದಾಗ ಹಾವು ಕಚ್ಚಿದೆ.ಕುಟುಂಬದವರು ತಕ್ಷಣವೇ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದರೂ, ಗುರುವಾರ ನಸುಕಿನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಈ ಕುರಿತು ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತ ವಿದ್ಯಾರ್ಥಿನಿಗೆ ಸರ್ಕಾರದಿಂದ ₹10 ಲಕ್ಷ ಪರಿಹಾರ ನೀಡಬೇಕು ಎಂದು ಅಖಿಲ ಭಾರತ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಭೀಮಾಶಂಕರ ಮಾಡಿಯಾಳ ಅವರು ಆಗ್ರಹಿಸಿದ್ದಾರೆ.




