ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚು ಸಮಯ ನೀಡಬೇಕು. ಶೈಕ್ಷಣಿಕ ವ್ಯವಸ್ಥೆ, ರಾಜಕೀಯ ವ್ಯವಸ್ಥೆ, ಧಾರ್ಮಿಕ ವ್ಯವಸ್ಥೆ, ಆರ್ಥಿಕ ವ್ಯವಸ್ಥೆಯ ಬಗ್ಗೆ ಸ್ವವಿಸ್ತಾರವಾಗಿ ವಿವರಿಸಿದರು. ಪ್ರತಿಯೊಬ್ಬ ತಂದೆ-ತಾಯಿಯವರು ವೈದ್ಯರು, ಇಂಜಿನಿಯರಿoಗ್ ಆಗಬೇಕು ಎಂದು ಕನಸ್ಸನ್ನು ಕಾಣುತ್ತಿರುತ್ತಾರೆ. ವಿದ್ಯಾರ್ಥಿಗಳಿಗೆ ರಾಮಾಯಣ ಮತ್ತು ವಾಲ್ಮೀಕಿಯ ಕಥೆಯ ತುಣುಕುಗಳನ್ನು ತಿಳಿಸುತ್ತಾ ವಿದ್ಯಾರ್ಥಿಗಳು ತಮ್ಮ ಜೀವನವನ್ನು ಯಾವ ರೀತಿ ರೂಪಿಸಿಕೊಳ್ಳಬೇಕು ಎಂದು ತುಮಕೂರಿನ ಹಿರೇಮಠದ ತಪ್ಪೋವನದ ಶ್ರೀ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿಯವರು ತಿಳಿಸಿದರು.
ನಗರದ ಶಿರಾ ರಸ್ತೆಯ ಶ್ರೀದೇವಿ ಪದವಿ ಕಾಲೇಜು ಮತ್ತು ಶ್ರೀದೇವಿ ಸ್ನಾತಕೋತ್ತರ ಕೇಂದ್ರದ ವತಿಯಿಂದ ಶ್ರೀಸೃಷ್ಟಿ ವಾರ್ಷಿಕೋತ್ಸವ ಸಮಾರಂಭ- 2024 ಕಾಲೇಜಿನ ಆವರಣದಲ್ಲಿ ಮೇ.24 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಶ್ರೀ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿಯವರು ಉದ್ಘಾಟಿಸಿ ಮಾತನಾಡುತ್ತಾ ಅವರು ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಯಾವ ಯಾವ ರೀತಿಯಲ್ಲಿ ಪ್ರಾಮುಖ್ಯತೆ ನೀಡಬೇಕು. ಶ್ರೀದೇವಿ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಮಕ್ಕಳಿಗೆ ಒಳ್ಳೆಯ ಕೆಲಸಕ್ಕೆ ನಿರ್ವಹಿಸಬೇಕು. ಮಕ್ಕಳು ಜೀವನ ರೂಪಿಸಲು ತಮ್ಮ ಪೋಷಕರು ತಮ್ಮ ಜೀವನವನ್ನು ಮುಟ್ಟುಪಿಟ್ಟಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ದೇಶ ಹಾಗೂ ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳಾಗಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸವೆಂದರೆ ಬರೀ ಸಂಪಾದನೆಗೆ ಮಾತ್ರ ಮೂಡಿಪಾಗದೆ ಉತ್ತಮ ವ್ಯಕ್ತಿಯಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್ರವರು ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಪದವೀಧರರಿಗೆ ತಮ್ಮ ವೃತ್ತಿ ಜೀವನವನ್ನು ಮುಂದುವರಿಸಲು ವಿಶಾಲವಾದ ಮಾಗೋಪಾರ್ಯಗಳಿವೆ. ಅಧ್ಯಯನಶೀಲತೆಯಲ್ಲಿ ತೊಡಗಿಸುತ್ತಾ ವ್ಯಕ್ತಿತ್ವವನ್ನು ರೂಪಿಸಿಕೊಂಡರೆ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಾಗುತ್ತದೆ ಎಂದು ತಿಳಿಸಿದರು. ಪದವಿ ಮುಗಿಸಿ ಹೊರ ಬರುತ್ತಿರುವ ವಿದ್ಯಾರ್ಥಿಗಳ ಕೈಯಲ್ಲಿ ರಾಷ್ಟ್ರದ ಭವಿಷ್ಯವಿರುತ್ತದೆ. ಒಬ್ಬ ವಿದ್ಯಾರ್ಥಿ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಬೇಕು ತಮ್ಮ ಜೀವನವನ್ನು ಹೇಗೆ ರೂಪಿಸಿಕೊಳ್ಳಬೇಕು ಎಂಬುದರ ಬಗ್ಗೆ ಚಿಂತಿಸಬೇಕಾಗುತ್ತದೆ ಎಂದು ಅರ್ಥಪೂರ್ಣವಾಗಿ ವಿವರಿಸಿದರು.
ಕಾರ್ಯಕ್ರಮದಲ್ಲಿ ಶ್ರೀದೇವಿ ವೈದ್ಯಕೀಯ ನಿರ್ದೇಶಕರಾದ ಡಾ. ರಮಣ್ ಆರ್ ಹುಲಿನಾಯ್ಕರ್, ಶ್ರೀದೇವಿ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್.ಪಾಟೀಲ್, ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಟ್ರಸ್ಟಿಯಾದ ಅಂಬಿಕಾ ಎಂ ಹುಲಿನಾಯ್ಕರ್, ಶ್ರೀದೇವಿ ಆಸ್ಪತ್ರೆಯ ನೇತ್ರ ತಜ್ಞರಾದ ಡಾ.ಲಾವಣ್ಯ, ಶ್ರೀದೇವಿ ಸಂಸ್ಥೆಯ ಆಡಳಿತಾಧಿಕಾರಿಯಾದ ಟಿ.ವಿ.ಬ್ರಹ್ಮದೇವಯ್ಯರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದರು.