ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ವಿಷಯ ಪರಿಣತಿ ಅತ್ಯಗತ್ಯ
ತುಮಕೂರು(ಕ.ವಾ.) ಆ.೧೧: ಖಾಸಗಿಯವರು ಅಕ್ರಮವಾಗಿ ಒತ್ತುವರಿ ಮಾಡದಂತೆ ಸರ್ಕಾರಿ ಆಸ್ತಿಯನ್ನು ಸಂರಕ್ಷಿಸಿ ನ್ಯಾಯಾಲಯದಲ್ಲಿ ವ್ಯಾಜ್ಯಗಳನ್ನು ನಿರ್ವಹಿಸಲು ಸರ್ಕಾರಿ ಅಧಿಕಾರಿ/ನೌಕರರು ಕಾನೂನು ವಿಷಯದಲ್ಲಿ ಪರಿಣತಿ ಹೊಂದಿರುವುದು ಅತ್ಯಗತ್ಯವೆಂದು ನಿವೃತ್ತ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಬೆಂಗಳೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಾಜಿ ಅಧ್ಯಕ್ಷರಾದ ವೆಂಕಟ ಸುದರ್ಶನ್ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಸಹಯೋಗದಲ್ಲಿ ನಗರದ ಕನ್ನಡ ಭವನದಲ್ಲಿಂದು ಸರ್ಕಾರಿ ಅಧಿಕಾರಿ/ನೌಕರರಿಗಾಗಿ “ಸರ್ಕಾರದ ಹಾಗೂ ಸಾರ್ವಜನಿಕ ಆಸ್ತಿಗಳ ಸಂರಕ್ಷಣೆ” ಕುರಿತು ಆಯೋಜಿಸಿದ್ದ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ ಹಾಗೂ ಸಾರ್ವಜನಿಕ ಆಸ್ತಿ ಸಂರಕ್ಷಣೆಗಾಗಿ ಅಧಿಕಾರಿ/ನೌಕರರು ಕಾಲ-ಕಾಲಕ್ಕೆ ಹೊರಡಿಸಲಾಗುವ ಕಾನೂನು ತಿದ್ದುಪಡಿಗಳ ಬಗ್ಗೆ ತಿಳಿದುಕೊಂಡಿರಬೇಕು. ಸರ್ಕಾರದ ವಿರುದ್ಧ ಯಾವುದೇ ವ್ಯಕ್ತಿಗಳು ನ್ಯಾಯಾಲಯದಲ್ಲಿ ದಾವೆ ಹೂಡಿದಾಗ ಯಾವ ರೀತಿ ಕ್ರಮಗಳನ್ನು ಅನುಸರಿಸಬೇಕೆಂದು ಮಾಹಿತಿ ನೀಡಿದರು.
ವಿಷಯ ನಿರ್ವಾಹಕರಿಗೆ ಕಾನೂನಿನ ಬಗ್ಗೆಯಿರುವ ಅರಿವಿನ ಕೊರತೆಯಿಂದ ಹಾಗೂ ನ್ಯಾಯಾಲಯದಲ್ಲಿರುವ ಸರ್ಕಾರಿ ವ್ಯಾಜ್ಯಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದೆ ಇರುವುದರಿಂದ ಪ್ರಕರಣಗಳು ಬಗೆಹರಿಯದೆ ನ್ಯಾಯಾಲಯದಲ್ಲಿ ಬಾಕಿ ಉಳಿದಿವೆ ಎಂದು ತಿಳಿಸಿದರಲ್ಲದೆ ನ್ಯಾಯಾಲಯ ನಿರ್ವಹಣಾ ವಿಧಾನ, ಸಿವಿಲ್ ವ್ಯಾಜ್ಯಗಳಿಗೆ ಸಂಬAಧಿಸಿದAತೆ ಸರ್ಕಾರದ ಪರವಾಗಿ ವಾದಿಸಲು ಕಲೆ ಹಾಕಬೇಕಾದ ದಾಖಲೆ ಮತ್ತು ಸಾಕ್ಷಿಗಳು, ಸರ್ಕಾರದ ವಿರುದ್ಧ ಬಂದ ನೋಟೀಸುಗಳಿಗೆ ಯಾವ ರೀತಿ ಉತ್ತರಿಸಬೇಕೆಂಬ ಬಗ್ಗೆ ಸರ್ಕಾರಿ ಅಧಿಕಾರಿ/ನೌಕರರಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಏರ್ಪಡಿಸಲಾಗಿದ್ದು, ಅಧಿಕಾರಿ/ನೌಕರರು ಕಾರ್ಯಾಗಾರದಿಂದ ಕಾನೂನು ಅರಿವು ಪಡೆದು ಸರ್ಕಾರಿ/ಸಾರ್ವಜನಿಕ ಆಸ್ತಿಯನ್ನು ಸಂರಕ್ಷಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ನಿರ್ಲಕ್ಷö್ಯ ತಾಳಿದರೆ ನ್ಯಾಯಾಲಯದ ವ್ಯಾಜ್ಯಗಳನ್ನು ಎದುರಿಸಬೇಕಾದ ಪರಿಸ್ಥಿತಿ ಒದಗಿ ಬರುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು/ನೌಕರರು ನಿಷ್ಠೆ, ಪ್ರಾಮಾಣಿಕ, ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು. ಎಷ್ಟೇ ಉನ್ನತ ಅಧಿಕಾರಿಗಳಾಗಿದ್ದರೂ ಕಾನೂನು ವಿಷಯದಲ್ಲಿ ಅರಿವು ಇಲ್ಲದಿದ್ದರೆ ಸರ್ಕಾರದ ವ್ಯಾಜ್ಯಗಳು ನ್ಯಾಯಾಲಯದಲ್ಲಿ ಬಗೆಹರಿಯದೆ ಬಾಕಿ ಉಳಿದುಕೊಳ್ಳುವ ಸಾಧ್ಯತೆ ಹೆಚ್ಚು ಎಂದು ತಿಳಿಸಿದರು.
ಸರ್ಕಾರಿ ಆಸ್ತಿ ಒತ್ತುವರಿಯಾದ ಸಂದರ್ಭದಲ್ಲಿ ಒತ್ತುವರಿ ಮಾಡಿರುವವರ ಬಗ್ಗೆ ನೌಕರರು ಇಲಾಖಾ ಮುಖ್ಯಸ್ಥರ ಗಮನಕ್ಕೆ ತರಬೇಕು. ನಂತರ ಇಲಾಖಾ ಮುಖ್ಯಸ್ಥರು ಪ್ರಕರಣದ ಬಗ್ಗೆ ತಮ್ಮ ಇಲಾಖೆಯ ಆಡಳಿತಾತ್ಮಕ ಕಾರ್ಯದರ್ಶಿಗಳ ಅವಗಾಹನೆಗೆ ತರಬೇಕು ಎಂದು ಮಾಹಿತಿ ನೀಡಿದರು.
ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ವಿಷಯ ಪರಿಣತಿ ಅತ್ಯಗತ್ಯ
Leave a comment
Leave a comment