ತುಮಕೂರು:ಕೇಂದ್ರ ಸರಕಾರ ಭಾರತೀಯ ದಂಡ ಸಂಹಿತೆ 1860 ಕ್ಕೆ ಬದಲಾಗಿ ಮಂಡಿಸಿರುವ ಭಾರತೀಯ ನ್ಯಾಯ ಸಂಹಿತೆ-2023 ರಲ್ಲಿ ಹಿಟ್ ಅಂಡ್ ರನ್ ಕೇಸಿಗೆ ಸಂಬAಧಿಸಿದAತೆ ತಂದಿರುವ ತಿದ್ದುಪಡಿ ಅತ್ಯಂತ ಅವೈಜ್ಞಾನಿಕವಾಗಿದ್ದು, ಕೂಡಲೆ ಹಿಂಪಡೆಯವAತೆ ಒತ್ತಾಯಿಸಿ ಜ.17ರಿಂದ ರಾಜ್ಯದಾದ್ಯಂತ ಲಾರಿ ಚಾಲಕರು ಮತ್ತು ಮಾಲೀಕರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸುತ್ತಿರುವುದಾಗಿ ತುಮಕೂರು ಜಿಲ್ಲಾ ಲಾರಿ ಚಾಲಕರ ಮತ್ತು ಸಹಾಯಕರ ಸಂಘ ನೇತೃತ್ವದಲ್ಲಿ ಲಾರಿ ಮಾಲೀಕರ ಸಂಘ ಹಾಗು ಇನ್ಬಿತರ ಚಾಲಕರ ಸಂಘಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ತುಮಕೂರು ಜಿಲ್ಲಾ ಲಾರಿ ಚಾಲಕರ ಮತ್ತು ಸಹಾಯಕರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಸೈಯದ್ ಮೆಹಬೂಬ್ ಪಾಷ,ಲಾರಿ ಮಾಲೀಕರ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್, ಕಾರ್ಯದರ್ಶಿ ಶೌಕತ್,ತುಮಕೂರು ತಾಲೂಕು ಲಾರಿ ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷರಾದ ಅಬ್ದುಲ್ ಖಾದರ್,ನಿರ್ದೇಶಕರಾದ ಟಿ.ಆರ್.ಸದಾ ಶಿವಯ್ಯ,ಸುರೇಶ್, ನಾಗಭೂಷಣ್ ಸೇರಿದಂತೆ ಹಲವರು, ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.