ತುಮಕೂರು- ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಉಲ್ ಫಿತರ್ ರಂಜಾನ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿAದ ಆಚರಿಸಲಾಯಿತು.
ಜಿಲ್ಲೆಯಾದ್ಯಂತ ರಂಜಾನ್ ಪ್ರಯುಕ್ತ ಮಸೀದಿಗಳು, ದರ್ಗಾಗಳನ್ನು ವಿದ್ಯುತ್ ದೀಪಾಲಂಕರಾದಿAದ ವಿಶೇಷವಾಗಿ ಸಿಂಗರಿಸಲಾಗಿತ್ತು.
ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಸಹ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಿದರು.
ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಜಮಾಯಿಸಿದ ಸಾವಿರಾರು ಮುಸ್ಲಿಂ ಬಾಂಧವರು ಬೆಳಿಗ್ಗೆ ೧೦.೩೦ಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಹಬ್ಬದ ಶುಭಾಶಯವನ್ನು ವಿನಿಮಯ ಮಾಡಿಕೊಂಡರು.
ಹೊಸ ಉಡುಪುಗಳನ್ನು ಧರಿಸಿ, ಒಬ್ಬರಿಗೊಬ್ಬರು ಆಲಿಂಗನ ಮಾಡಿ ಹಬ್ಬದ ಶುಭಾಶಯ ಕೋರಿದ್ದು ಕಂಡು ಬಂತು.
ರAಜಾನ್ ಹಬ್ಬದ ಸಂಭ್ರಮ ಹಿಂದೂ ಮತ್ತು ಮುಸ್ಲಿಂ ಬಾಂಧವರ ಭಾವೈಕ್ಯತೆಯ ಸಂಕೇತವಾಗಿ ಮಾರ್ಪಟ್ಟಿದ್ದು, ಮುಸ್ಲಿಂ ಬಾಂಧವರಿಗೆ ಹಿಂದೂ ಸಮುದಾಯದವರು ಸಹ ಹಬ್ಬದ ಶುಭಾಶಯ ಕೋರುವ ಮೂಲಕ ಭಾವೈಕ್ಯತೆಯನ್ನು ಸಾರಿದರು.
ಈದ್ಗಾ ಮೈದಾನಕ್ಕೆ


ಮಾರ್ಗ ಬದಲಾವಣೆ
ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರಿಂದ ಯಾವುದೇ ರೀತಿಯ ಅಡಚಣೆಗಳು ಉಂಟಾಗದAತೆ ಮುಂಜಾಗ್ರತಾ ಕ್ರಮವಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು.