ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಡಾ.ಜಿ.ಪರಮೇಶ್ವರ ಅವರ ಗೆಲುವನ್ನು ಸಂಭ್ರಮಿಸಿದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಳು
ತುಮಕೂರು: ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಕೊರಟಗೆರೆ ಕ್ಷೇತ್ರದಿಂದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ ಮತ್ತು ಸಿದ್ಧಾರ್ಥ ಸಮೂಹ ಸಂಸ್ಥೆಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.
ನಗರದ ಮರಳೂರಿನಲ್ಲಿರುವ ಎಸ್ಎಸ್ಐಟಿ ಆವರಣದಲ್ಲಿ ನೂರಾರು ಜನ ಬೋಧಕ, ಬೋಧಕೇತರ ಸಿಬ್ಬಂದಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯು ಗ್ರಾಮೀಣ ಮತ್ತು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣವೆಂಬ ಬೆಳಕು ನೀಡುವ ಮೂಲಕ ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿAಗ್ ಸೇರಿದಂತೆ ಶಾಲಾ ಸಂಸ್ಥೆಗಳನ್ನು ಮುನ್ನಡೆಸುತ್ತಿರುವ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅತ್ಯಮೂಲ್ಯ ಕೊಡುಗೆಗಳನ್ನು ಮೆಲುಕು ಹಾಕಲಾಯಿತು.
ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್.ರವಿಪ್ರಕಾಶ ಪಟಾಕಿ ಹಚ್ಚುವ ಮೂಲಕ ಡಾ.ಜಿ.ಪರಮೇಶ್ವರ ಅವರ ಗೆಲುವಿನ ಸಂಭ್ರಮವನ್ನು ಸಂಭ್ರಮಿಸಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಅದೇ ರೀತಿ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿಯೂ ಪ್ರಾಂಶುಪಾಲರಾದ ಡಾ.ವಿಜಯಭಾಸ್ಕರ್ ಅವರು ಸಿಬ್ಬಂದಿ ವರ್ಗದವರಿಗೆ ಸಿಹಿ ಹಂಚಿ ಡಾ.ಜಿ.ಪರಮೇಶ್ವರ ಅವರ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದರು.