ಕನ್ನಡ ನಾಡು, ನುಡಿಯ ಏಳ್ಗೆಗಾಗಿ ರಾಜ್ಯ ಸರ್ಕಾರ ಕಂಕಣಬದ್ಧವಾಗಿದೆ-ಗೃಹ ಸಚಿವ ಡಾ:ಜಿ.ಪರಮೇಶ್ವರ್
ತುಮಕೂರು(ಕ.ವಾ) ನ.೧: ಕನ್ನಡ ನಾಡು ನುಡಿಯ ಏಳ್ಗೆಗಾಗಿ ರಾಜ್ಯ ಸರ್ಕಾರ ಕಂಕಣಬದ್ಧವಾಗಿದೆ. ಕನ್ನಡ ನಾಡಿನ ಜನತೆಯ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರ ಕೆಲಸ ಮಾಡುತ್ತಿದೆ. ಮೈಸೂರು ರಾಜ್ಯಕ್ಕೆ ಕರ್ನಾಟಕವೆಂದು ಮರು ನಾಮಕರಣವಾಗಿ ೧ನೇ ನವೆಂಬರ್ ೨೦೨೩ಕ್ಕೆ ೫೦ ವರ್ಷ ಪೂರ್ಣಗೊಳ್ಳಲಿದ್ದು, ‘ಕರ್ನಾಟಕ ಸಂಭ್ರಮ-೫೦’ ಘೋಷಣೆಯಡಿ ಕರ್ನಾಟಕದ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬAಧಿಸಿದAತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಇಡೀ ವರ್ಷ ಹಮ್ಮಿಕೊಳ್ಳಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಜಿ.ಪರಮೇಶ್ವರ್ ಅವರು ತಿಳಿಸಿದರು.
ರಾಜ್ಯದ ಪ್ರತಿಯೊಬ್ಬ ನಾಗರಿಕರೂ ಕೂಡ ಕನ್ನಡದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಕರ್ನಾಟಕ ಮಾತ್ರವಲ್ಲದೆ ದೇಶ ವಿದೇಶಗಳಲ್ಲೂ ಸಹ ಕನ್ನಡವನ್ನು ಪಸರಿಸುವಂತೆ ನಾವೆಲ್ಲರೂ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ಜಿಲ್ಲಾಡಳಿತ ವತಿಯಿಂದ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿAದು ೬೮ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ರಾಜಧಾನಿ ಬೆಂಗಳೂರಿಗೆ ಹೆಬ್ಬಾಗಿಲಿನಂತಿರುವ ತುಮಕೂರು ಭೌಗೋಳಿಕವಾಗಿ, ಸಾಂಸ್ಕೃತಿಕವಾಗಿ, ಸಾಹಿತ್ಯಿಕವಾಗಿ, ಧಾರ್ಮಿಕವಾಗಿ ಹಾಗೂ ಶೈಕ್ಷಣಿಕವಾಗಿ ಅನೇಕ ಮಹತ್ವಗಳನ್ನು ಒಳಗೊಂಡಿರುವ ವಿಶಾಲವಾದ ಜಿಲ್ಲೆಯಾಗಿದೆ. ಮಧುಗಿರಿಯ ಏಕಶಿಲಾ ಬೆಟ್ಟ, ಕೈದಾಳ, ಶಿರಾ, ಮುಂತಾದ ಪ್ರಾಂತ್ಯಗಳು ಜಿಲ್ಲೆಯ ಚಾರಿತ್ರಿಕ ಮಹತ್ವವನ್ನು ಸಾರುತ್ತಿವೆ ಎಂದರು.
ಪ್ರಣಾಳಿಯಲ್ಲಿ ಘೋಷಿಸಿದಂತೆ ನಮ್ಮ ಸರ್ಕಾರ ಐದು ಪ್ರಮುಖ ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಯಶಸ್ವಿಯಾಗಿ ಅನುಷ್ಟಾನಗೊಳಿಸಿದೆ, ಈ ಪೈಕಿ ಶಕ್ತಿ ಯೋಜನೆಯಡಿ ತುಮಕೂರು ವಿಭಾಗದಲ್ಲಿ ಪ್ರತಿದಿನ ೧.೭೦ ಲಕ್ಷಕ್ಕೂ ಅಧಿಕ ಮಹಿಳಾ ಪ್ರಯಾಣಿಕರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಜೂನ್ ೧೧ ರಿಂದ ಇಲ್ಲಿಯವರೆಗೆ ೨.೨೨ ಕೋಟಿ ಮಹಿಳಾ ಪ್ರಯಾಣಿಕರು ಜಿಲ್ಲೆಯಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ತಿಳಿಸಿದರು.