ಸಿದ್ಧಗಂಗಾ ವಿದ್ಯಾಸಂಸ್ಥೆಯ ಪ್ರತಿಷ್ಠಿತ ಸಿದ್ದಗಂಗಾ ಇಂಜಿನಿಯರಿoಗ್ ಕಾಲೇಜು ವಿದ್ಯಾರ್ಥಿ ಜೀವನದಿಂದಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಸಕ್ರಿಯ ಕಾರ್ಯಕರ್ತರಾಗಿದ್ದರು. ಎಬಿವಿಪಿ ತುಮಕೂರು ಮಹಾನಗರ ಕಾರ್ಯದರ್ಶಿಯಿಂದ ಜಿಲ್ಲೆಯ, ರಾಜ್ಯದ ಅನ್ಯ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. 2013ರಿಂದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನಾಗಿ ಎರಡು ಅವಧಿಗೆ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿದ್ದರು. ನಂತರ ಸುರೇಶ್ ಗೌಡರು ಬಿಜೆಪಿ ಅಖಂಡ ತುಮಕೂರು ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿದ್ದ ಅವಧಿಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಆಗಿದ್ದರು. ತುಮಕೂರು ಸಂಘಟನಾತ್ಮಕ ಜಿಲ್ಲೆಯಾದ ನಂತರ ಎಸ್.ಸಿ.ಮೋರ್ಚಾದ ಜಿಲ್ಲಾ ಅಧ್ಯಕ್ಷರಾಗಿ ಜಿಲ್ಲೆಯ ಅನೇಕ ದಲಿತ ಕಾಲೋನಿಗಳ ಪ್ರವಾಸ, ಸಹಪಂಕ್ತಿ ಭೋಜನದಂತಹ ಅನೇಕ ಕಾರ್ಯಕ್ರಮಗಳ ಮೂಲಕ ಯಶಸ್ವಿಯಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಕಳೆದ ಐದು ವರ್ಷಗಳಿಂದ ತುಮಕೂರು ಜಿಲ್ಲೆಯ ಭೋವಿ ಸಂಘದ ಜಿಲ್ಲಾಧ್ಯಕ್ಷರಗಿ ಸಮುದಾಯದ ಅನೇಕ ಹೋರಾಟಗಳ, ಜಿಲ್ಲಾ ಮಟ್ಟದ ಕಾರ್ಯಕ್ರಮ, ಸಮಾವೇಶಗಳ ನೇತೃತ್ವ ವಹಿಸಿದ್ದಾರೆ.
2018ರ ತುಮಕೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಉಪ್ಪಾರಹಳ್ಳಿ ವಾರ್ಡನ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿಗಳಿಗಿಂತ ಹೆಚ್ಚು ಮತ ಗಳಿಸಿದರೂ ಪಕ್ಷೇತರ ಅಭ್ಯರ್ಥಿಯ ವಿರುದ್ಧ ಪರಾಭವಗೊಂಡಿದ್ದರು. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕ್ಷೇತ್ರದ ಭೋವಿ ಕಾಲೋನಿಗಳಿಂದ ಜನರನ್ನು ಸಂಘಟಿಸಿ ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ರವರ ಉಪಸ್ಥಿತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಸಮಾವೇಶ ಆಯೋಜಿಸಿ ಗೆಲುವಿಗೆ ಶ್ರಮಿಸಿದ್ದರು. 2020ರ ಶಿರಾ ಉಪಚುನಾವಣೆಯಲ್ಲಿ ಅಂದಿನ ರಾಜ್ಯಾಧ್ಯಕ್ಷರಾಗಿದ್ದ ನಳೀನ್ ಕುಮಾರ್ ಕಟೀಲ್, ವಿಜಯೇಂದ್ರ, ಅನೇಕ ಮಂತ್ರಿಗಳ ಉಪಸ್ಥಿತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮದ್ದಕ್ಕಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಸಮಾವೇಶದ ನೇತೃತ್ವ ವಹಿಸಿ ಗೆಲುವಿಗೆ ಶ್ರಮಿಸಿದ್ದರು.
ಪ್ರಸ್ತುತ ವಿಜಯೇಂದ್ರ ಯಡಿಯೂರಪ್ಪರವರ ನೇತೃತ್ವದ ರಾಜ್ಯ ಬಿಜೆಪಿ ತಂಡದಲ್ಲಿ ಎಸ್.ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಪ್ರಮುಖ ಹುದ್ದೆಗೆ ನೇಮಕವಾಗುವ ಮೂಲಕ ಸಂಘಪರಿವಾರದ ಹಿನ್ನೆಲೆ ಇರುವ ಸಮುದಾಯದ ಮುಖಂಡರಾಗಿ ಪಕ್ಷದ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ಅವಕಾಶ ದೊರೆತಿದೆ.
ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ಅವಕಾಶ ದೊರೆತಿದೆ.
Leave a comment
Leave a comment