ತುಮಕೂರು(ಕ.ವಾ)ಆ.೨೯: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ ೩೦ರಂದು ಮಧ್ಯಾಹ್ನ ೧೨ ಗಂಟೆಗೆ ನಗರ ಕೇಂದ್ರ ಗ್ರಂಥಾಲಯದಲ್ಲಿ ಗೃಹಲಕ್ಷಿö್ಮ
ಯೋಜನೆ ಚಾಲನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವರು, ಭಾರತ ಸರ್ಕಾರ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಎ. ನಾರಾಯಣಸ್ವಾಮಿರವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ. ಪರಮೇಶ್ವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕರಾದ ಟಿ.ಬಿ.ಜಯಚಂದ್ರ ಅವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ತುಮಕೂರು ನಗರ ವಿಧಾನಸಭಾ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ಅವರು ಅಧ್ಯಕ್ಷತೆ ವಹಿಸುವರು.
ಸಂಸದರುಗಳಾದ ಜಿ.ಎಸ್. ಬಸವರಾಜು, ಡಿ.ಕೆ. ಸುರೇಶ್, ಜಗ್ಗೇಶ್, ಎಸ್.ಆರ್.ಶ್ರೀನಿವಾಸ್, ಡಾ: ಹೆಚ್.ಡಿ. ರಂಗನಾಥ್, ವಿಧಾನಪರಿಷತ್ನ ಶಾಸಕರಾದ ಡಾ. ವೈ.ಎ. ನಾರಾಯಣಸ್ವಾಮಿ, ಕೆ.ಎ.ತಿಪ್ಪೇಸ್ವಾಮಿ, ಚಿದಾನಂದ ಎಂ.ಗೌಡ, ರಾಜೇಂದ್ರ ಆರ್. ಶಾಸಕರಾದ ಕೆ.ಷಡಾಕ್ಷರಿ, ಎಂ.ಟಿ.ಕೃಷ್ಣಪ್ಪ, ಸಿ.ಬಿ.ಸುರೇಶ್ಬಾಬು, ಬಿ. ಸುರೇಶ್ಗೌಡ, ಹೆಚ್.ವಿ. ವೆಂಕಟೇಶ್ ಹಾಗೂ ಮಹಾಪೌರರಾದ ಪ್ರಭಾವತಿ ಎಂ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಸೇರಿದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಇಂದು ‘ಗೃಹಲಕ್ಷ್ಮಿ’ ಯೋಜನೆ ಚಾಲನಾ ಕಾರ್ಯಕ್ರಮ

Leave a comment
Leave a comment