ತುಮಕೂರು : ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಡಾ|| ಶ್ರೀ ಶಿವಕುಮಾರ ಸ್ವಾಮಿಗಳ ೫ನೇ ವರ್ಷದ ಪುಣ್ಯ ಸಂಸ್ಮರಣೋತ್ಸವವನ್ನು ಜನವರಿ ೨೧ರ ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ಶ್ರೀ ಸಿದ್ಧಗಂಗಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ಧಗಂಗಾ ಸಂಸ್ಥೆಯ ಕಾರ್ಯದರ್ಶಿಗಳಾದ ನಂಜುAಡಪ್ಪ ತಿಳಿಸಿದರು.
ಅಂದು ಬೆಳಿಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರು ವಹಿಸಲಿದ್ದಾರೆ. ದಿವ್ಯ ನೇತೃತ್ವವನ್ನು ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗಮಹಾಸ್ವಾಮಿಗಳು ವಹಿಸಲಿದ್ದು, ದಿವ್ಯ ಸಾನಿಧ್ಯವನ್ನು ಡಾ.ಶ್ರೀ ತೋಂಟದ ಸಿದ್ಧರಾಮಸ್ವಾಮಿಗಳು ವಹಿಸಲಿದ್ದು, ಸಿದ್ಧಗಂಗಾ ಮಠದ ಉತ್ತರಾಧಿಕಾರಿಗಳಾದ ಶ್ರೀ ಶಿವಸಿದ್ಧೇಶ್ವರ ಸ್ವಾಮಿಗಳು ಉಪಸ್ಥಿತರಿರುವರು.
ಡಾ.ಶ್ರೀ ಶಿವಕುಮಾರಸ್ವಾಮೀಜಿ ಆಸ್ಪತ್ರೆಯ ಎಸ್.ಎಂ.ಸಿ.ಆರ್.ಐ. ಉದ್ಘಾಟನೆ ಯನ್ನು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್ ಮಾಡಲಿದ್ದು, ಡಾ.ಶ್ರೀ ಶಿವ ಕುಮಾರಸ್ವಾಮೀಜಿರವರ ಸ್ಮತಿವನ ಉದ್ಘಾಟನೆಯನ್ನು ಅರಣ್ಯ ಹಾಗೂ ಪರಿಸರ ವಿಜ್ಞಾನ ಸಚಿವ ಈಶ್ವರ್ ಖಂಡ್ರೆ ಉದ್ಘಾ ಟಿಸಲಿದ್ದು, ಶ್ರೀ ಸಿದ್ಧಗಂಗಾ ಫಾರ್ಮಸಿ ಕಾಲೇಜು ನೂತನ ಕಟ್ಟಡವನ್ನು ಸಹಕಾರ ಸಚಿವ ರಾದ ಕೆ.ಎನ್.ರಾಜಣ್ಣನವರು ಉದ್ಘಾಟಿಸಲಿದ್ದಾರೆ.
ಸ್ನಾತಕೋತ್ತರ ವಿಭಾಗದ ಎಸ್.ಎಂ.ಸಿ.ಆರ್.ಐ., ಕಟ್ಟಡದ ಶಂಕುಸ್ಥಾಪನೆಯನ್ನು ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಎಂ.ಬಿ. ಪಾಟೀಲರು ನೆರವೇರಿಸಲಿದ್ದು, ವಸತಿ ಗೃಹಗಳ ಕಟ್ಟಡದ ಶಂಕುಸ್ಥಾಪನೆಯನ್ನು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜು ನಯ್ಯ ಅವರು ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ, ಮುಖ್ಯಮಂತ್ರಿ ಸಲಹೆಗಾರರಾದ ಬಿ.ಆರ್.ಪಾಟೀಲ್, ಲೋಕಸಭಾ ಸದಸ್ಯರಾದ ಜಿ.ಎಸ್.ಬಸವ ರಾಜು ಹಾಗೂ ವಿಶೇಷ ಆಹ್ವಾನಿತರಾಗಿ ಶಾಸಕರುಗಳಾದ ಹೆಚ್.ಸಿ.ಬಾಲಕೃಷ್ಣಪ್ಪ, ಬಿ.ಸುರೇಶ್ಗೌಡ, ಜಿ.ಬಿ.ಜ್ಯೋತಿಗಣೇಶ್ ಮತ್ತು ಎನ್.ಶ್ರೀನಿವಾಸ್ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಡಾ|| ಶ್ರೀ ಶಿವಕುಮಾರ ಸ್ವಾಮಿಗಳ ೫ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ
Leave a comment
Leave a comment