ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯ ಮತ್ತು ಪ್ರಧಾನ ಕಾರ್ಯದರ್ಶಿ ಆರ್.ತಿಪ್ಪೇಸ್ವಾಮಿರವರು ಹೈಕೋರ್ಟ್ ನ್ಯಾಯಮೂರ್ತಿ ಮತ್ತು ತುಮಕೂರು ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಎಸ್.ಜಿ.ಪಂಡಿತ್ ರವರನ್ನು ಭೇಟಿ ಮಾಡಿ ಜಿಲ್ಲಾ ವಕೀಲರ ಸಂಘದ ೩ನೇ ಮಹಡಿ ಕಾಮಗಾರಿಗೆ ಮತ್ತು ಲಿಫ್ಟ್ ಗೆ ಸರ್ಕಾರದಿಂದ ಹಣವನ್ನು ಮಂಜೂರು ಮಾಡಿಕೊಡಬೇಕೆಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ರಾಜ್ಯ ವಕೀಲರ ಪರಿಷತ್ ನ ಕಾರ್ಯಕಾರಿ ಸಮಿತಿ ಸದಸ್ಯರಾದ ಎಂ.ಎನ್.ಮಧುಸೂಧನ್ ರವರು ಉಪಸ್ಥಿತರಿದ್ದರು.