ಜುಲೈ 13ಕ್ಕೆ ರಾಷ್ಟ್ರೀಯ ಜನತಾ ನ್ಯಾಯಾಲಯ
ತುಮಕೂರು-ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದಿನಾಂಕ:13-07-2024 ರಂದು ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಜನತಾ ನ್ಯಾಯಾಲಯ ಹಮ್ಮಿಕೊಂಡಿರುವುದಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಯಂತಕುಮಾರ್ ತಿಳಿಸಿದರು.
ನ್ಯಾಯಾಲಯದ ಆವರಣದಲ್ಲಿ ಇಂದು ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಮಾ.16 ರಂದು ಆಯೋಜಿಸಲಾಗಿದ್ದ ಜನತಾ ನ್ಯಾಯಾಲಯದಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 94564 ಪ್ರಕರಣಗಳಲ್ಲಿ 9923 ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು 129386 ಪ್ರಕರಣಗಳನ್ನು ವಲೇವಾರಿ ಮಾಡಲಾಗಿದ್ದು ಒಟ್ಟು 139309 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದರು.
ಸರ್ವರಿಗೂ ನ್ಯಾಯ ಎಂಬುದು ಭಾರತ ಕಾನೂನು ಸೇವೆಗಳ ಧ್ಯೇಯವಾಗಿದ್ದು, ಯಾವುದೇ ಪ್ರಜೆಯೂ ತನ್ನ ಆರ್ಥಿಕ ಅಥವಾ ಇತರೆ ದೌರ್ಬಲ್ಯಗಳ ಕಾರಣಗಳಿಂದಾಗಿ ನ್ಯಾಯದಿಂದ ವಂಚಿತವಾಗಬಾರದೆoಬ ಉದ್ದೇಶದಿಂದ ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಸಮಾಜದ ದುರ್ಬಲ ವರ್ಗಗಳಿಗೆ ಒದಗಿಸುವ ಸಲುವಾಗಿ ಜನತಾ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ ಎಂದರು.
ಸುಪ್ರೀಮ್ ವಿಶೇಷ ಲೋಕಅದಾಲತ್: ಭಾರತದ ಸರ್ವೋಚ್ಛ ನ್ಯಾಯಾಲಯವು ಜು.29 ರಿಂದ ಆ.3ರವರೆಗೆ ವಿಶೇಷ ಲೋಕ್ ಅದಾಲತ್ ನಡೆಸಲು ಉದ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಪಕ್ಷಗಾರರಿಗೆ, ಎದುರುದಾರರ ಜೊತೆ ಪೂರ್ವಭಾವಿ ಲೋಕ ಅದಾಲತ್ ನಡೆಸಲು ತಾಲ್ಲೋಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ವಿಡಿಯೋ ಕಾನ್ಸರೆನ್ಸ್ ಮಾಡಲಾಗಿರುತ್ತದೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಎಲ್ಲಾ ತಾಲ್ಲೋಕು ಕಾನೂನು ಸೇವಾ ಸಮಿತಿಗಳಲ್ಲಿ ವಿಡಿಯೋ ಕಾನ್ಸರೆನ್ಸ್ ಸ್ಥಾಪಿಸಲಾಗಿದ್ದು, ಎಲ್ಲಾ ಪಕ್ಷಗಾರರು ಇದರ ಮೂಲಕ ಸರ್ವೋಚ್ಛ ನ್ಯಾಯಾಲಯವು ನಡೆಸುವ ಲೋಕ್ ಅದಾಲತ್ನಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ ಎಂದರು.
ಭಾರತ ಸರ್ವೋಚ್ಛ ನ್ಯಾಯಾಲಯ ನಡೆಸುವ ವಿಶೇಷ ಅದಾಲತ್ನಲ್ಲಿ ತುಮಕೂರು ಜಿಲ್ಲೆಗೆ ಸಂಬAಧಿಸಿದoತೆ 18 ಪ್ರಕರಣಗಳನ್ನು ರಾಜೀ ಸಂಧಾನದಲ್ಲಿ ವಿಡಿಯೋ ಕಾನ್ಸರೆನ್ಸ್ ಮೂಲಕ ಇತ್ಯಾರ್ಥಪಡಿಸಲು ಅವಕಾಶ ಮಾಡಿರುವುದಾಗಿ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ನೂರುನ್ನೀಸ ಮಾತನಾಡುತ್ತಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಮ್ಮ ತಮ್ಮ ವಕೀಲರನ್ನು ಸಂಪರ್ಕಿಸಿ ರಾಜಿ ಮಾಡಿಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 0816-2255133 ಅಥವಾ 9141193959ನ್ನು ಸಂಪರ್ಕಿಸಿ ಎಂದು ಮನವಿ ಮಾಡಿದರು.