ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ವತಿಯಿಂದ ಹಮ್ಮಿಕೊಂಡಿರುವ ಸ್ನಾತಕೋತ್ತರ ಅಂತರ ವಿಭಾಗಗಳ ವಾರ್ಷಿಕ ಕ್ರೀಡಾಕೂಟಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ವಿವಿಯ ವಿವಿಧ ಸ್ನಾತಕೋತ್ತರ ವಿಭಾಗಗಳ ಒಟ್ಟು 19 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿವೆ. ಎರಡು ವಾರಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಕಬ್ಬಡಿ, ಥ್ರೋ ಬಾಲ್, ಖೋಖೋ, ಕ್ರಿಕೆಟ್, ವಾಲಿಬಾಲ್, ಚೆಸ್, ಕೇರಂ, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ಪಂದ್ಯಾವಳಿಗಳು ಮತ್ತು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡೆಗಳು ನಡೆಯಲಿವೆ. ಪುರುಷರ ಮತ್ತು ಮಹಿಳೆಯರ ಕಬ್ಬಡಿ ಮತ್ತು ಥ್ರೋ ಬಾಲ್ ಪಂದ್ಯಗಳು ಮೊದಲ ದಿನ ನಡೆದವು.

ವಿವಿಯ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ನಿರ್ದೇಶಕ ಡಾ. ಎ. ಎಂ. ಮಂಜುನಾಥ್ ಉಪಸ್ಥಿತರಿದ್ದರು.
