ಇಂದಿರಾ ಕ್ಯಾಂಟಿನ್’ಗೆ ಜಿಲ್ಲಾಧಿಕಾರಿ ಶ್ರೀನಿವಾಸ.ಕೆ ಅನೀರಿಕ್ಷಿತ ಭೇಟಿ
ತುಮಕೂರು(ಕ.ವಾ.)ಜೂ.೨೦: ಜಿಲ್ಲೆಯ ತಿಪಟೂರು ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿಯಿರುವ ಇಂದಿರಾ ಕ್ಯಾಂಟಿನ್ಗೆ ಇಂದು ಜಿಲ್ಲಾಧಿಕಾರಿ ಶ್ರೀನಿವಾಸ.ಕೆ ಅವರು ಅನೀರಿಕ್ಷಿತ ಭೇಟಿ ನೀಡಿ ಆಹಾರದ ಗುಣಮಟ್ಟ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ನೈರ್ಮಲ್ಯತೆ ಕುರಿತು ಪರಿಶೀಲನೆ ನಡೆಸಿದರು.
ಕಡಿಮೆ ಬೆಲೆಯಲ್ಲಿ ಊಟ ತಿಂಡಿ ನೀಡುವ ಇಂದಿರಾ ಕ್ಯಾಂಟೀನ್ಗಳ ಆಹಾರದ ಗುಣಮಟ್ಟ, ಕುಡಿಯುವ ನೀರಿನ ವ್ಯವಸ್ಥೆ, ನೈರ್ಮಲ್ಯತೆ ಬಗ್ಗೆ ಗ್ರಾಹಕರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಇಂದಿರಾ ಕ್ಯಾಂಟೀನ್ ನಿರ್ವಹಣೆಯಲ್ಲಿ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಿಪಟೂರು ಉಪವಿಭಾಗಾಧಿಕಾರಿ ಕಲ್ಪಶ್ರೀ, ವಿವಿಧ ತಾಲೂಕ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಹಾಜರಿದ್ದರು.