ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿರಿವಾರ ಮತ್ತು ಸೋರೆಕುಂಟೆ ಗ್ರಾಮಪಂಚಾಯಿತಿ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಎರಡು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ.
ಕ್ಯಾಟಗೆರಿ ಎ ಗೆ ಮೀಸಲಾಗಿದ್ದ ಸೋರೆಕುಂಟೆ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಜೆ ಸೌಮ್ಯ ಡಿ. ಅವರು ಆಯ್ಕೆಯಾದರೆ, ಎಸ್ಸಿ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಮಿದೇವಮ್ಮ ಅವರುಗಳು ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ.
ಸಿರಿವಾರ ಗ್ರಾಮಪಂಚಾಯಿತಿ ಯ ಅಧ್ಯಕ್ಷ ಸ್ಥಾನ ಎಸ್.ಸಿ.ಮಹಿಳೆಗೆ ಮೀಸಲಾಗಿದ್ದು, ಶ್ರೀ ಮತಿ ಜಯಮ್ಮ ಅವರು ಅವಿರೋಧವಾಗಿ ಆಯ್ಕೆಯಾದರು. ಕ್ಯಾಟಗೆರಿ ಎ ಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಮಹಮದ್ ಏಜಾಜ್ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷರುಗಳನ್ಬು ಅಭಿನಂದಿಸಿರುವ ಶಾಸಕರಾದ ಬಿ.ಸುರೇಶಗೌಡ ಅವರು, ಎರಡನೇ ಅವಧಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬೆಂಬಲಿತ ಸದಸ್ಯರುಗಳು ಆಯ್ಕೆಯಾಗುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿರುವುದನ್ನು ಸಾಭೀತು ಮಾಡಿದೆ. ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ತಮ್ಮ ತಮ್ಮ ಗ್ರಾ.ಪಂಗಳ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಅನುದಾನ ಬಳಸಿಕೊಂಡು ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ.
ಸೋರೆಕುಂಟೆ ಗ್ರಾಮಪಂಚಾಯಿತಿ ಅಧ್ಯಕ್ಷೆ ಸೌಮ್ಯ. ಸಿರಿವಾರ ಗ್ರಾ.ಪಂ ಅಧ್ಯಕ್ಷೆ ಜಯಮ್ಮ ಅವರುಗಳು ಅಧ್ಯಕ್ಷರಾಗಿ ಆಯ್ಕೆಯಾಗಲು ಸಹಕರಿಸಿದ ಶಾಸಕರಾದ ಬಿ.ಸುರೇಶ್ ಗೌಡ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.