ಲೈಂಗಿಕ ಕಿರುಕುಳದ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ,ಕುಸ್ತಿಪಟು ಗಳ ಪ್ರತಿಭಟನೆ ಬೆಂಬಲಿಸಿ ಹಾಗೂ ಲೈಂಗಿಕ ಕಿರುಕುಳದ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ.
ಒಲಂಪಿಕ್ ಪದಕ ವಿಜೇತರು ,ವಿಶ್ವ ಚಾಂಪಿಯನ್ ಕುಸ್ತಿ ಪಟುಗಳು ಸೇರಿದಂತೆ ದೇಶದ ಹೆಮ್ಮೆಯ ಕುಸ್ತಿ ಕ್ರೀಡಾಪಟುಗಳು ೨೦೨೩ ಏಪ್ರಿಲ್ ೨೪ ರಿಂದ ನವದೆಹಲಿಯ ಜಂತರ್ ಮಂಥರ್ ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವುದು ಬೆಂಬಲಿಸಿ ಈ ಕೂಡಲೇ ಪೋಸ್ಕೋ ಸೇರಿದಂತೆ ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಿಂಸೆ ನಡೆಸಿರುವ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ರನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಬಂಧಿಸಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದಿನಾಂಕ ೧೮-೫-೨೦೨೩ ರಂದು ಮಧ್ಯಾನ ೨ಘಂಟೆಯಿAದ ನಗರದ ಟೌನ್ ಹಾಲ್ ಸರ್ಕಲ್ ಬಳಿ ಸಿಐಟಿಯು –ಕೆಪಿಆರ್ ಎಸ್ ಜಂಟಿಯಾಗಿ ಪ್ರತಿಭಟನೆ ನಡೆಸಲಯಿತು.
ಪೊಲೀಸ್ ದೂರು ನೀಡಿದ್ದರೂ ಎಪ್ ಐ ಆರ್ ದಾಖಲಾಗಿರಲಿಲ್ಲ .ಸುಪ್ರೀಂ ಕೋರ್ಟ್ ನ ಮಧ್ಯಪ್ರವೇಶದ ನಂತರವಷ್ಟೇ ಎಫ್ ಐ ಆರ್ ದಾಖಲಾಗಿದೆ. ಈ ಪ್ರತಿಭಟನಾ ಕುಸ್ತಿಪಟುಗಳು ತಮ್ಮ ಮೇಲಾಗಿರುವ ಲೈಂಗಿಕ ಕಿರುಕುಳ ಹಾಗೂ ಹಿಂಸೆ ಸಂಬAಧ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಮಾತ್ರ ಕೇಳುತ್ತಿದ್ದಾರೆ ಹಾಗೂ ಕುಸ್ತಿ ಪಟುಗಳ ಆರೋಪದ ಹಿನ್ನೆಲೆಯಲ್ಲಿ ರಚಿಸಲಾದ ವಿಚಾರಣಾ ಸಮಿತಿಯ ವರದಿಯನ್ನು ಸಾರ್ವಜನಿಕರ ಅವಗಾಹನೆ ತರಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಭಾರತ ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಇನ್ನಿತರ ಸಿಬ್ಬಂದಿಗಳು, ಅಪ್ರಾಪ್ತ ಹೆಣ್ಣು ಮಕ್ಕಳು ಸೇರಿದಂತೆ ಪ್ರಖ್ಯಾತ ಮಹಿಳಾ ಕುಸ್ತಿ ಪಟುಗಳನ್ನು ಲೈಂಗಿಕ ಕಿರುಕುಳ ಹಾಗೂ ಹಿಂಸೆಗೆ ಒಳಪಡಿಸಿರುವುದು ಅತ್ಯಂತ ಅಘಾತಕಾರಿ ಮತ್ತು ದೇಶವೇ ತಲೆತಗ್ಗಿಸುವಂತಹ ಘಟನೆಯಾಗಿದೆ.
” ಭೇಟಿ ಬಚಾವೋ , ಭೇಟಿ ಪಡಾವೋ” ಎಂದು ಪ್ರಚಾರ ಮಾಡುವ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ,ಹೀನ ಅಪರಾಧದ ಆರೋಪಿ ಬಿಜೆಪಿ ಸಂಸದನನ್ನು ರಕ್ಷಿಸುತ್ತಿರುವುದು ನಾಚೀಕೆಗೇಡಿನ ಸಂಗತಿಯಾಗಿದೆ. ದೂರಿನ ಆಧಾರದಲ್ಲಿ ಕಾನೂನು ಕ್ರಮ ಜರುಗಿಸಿ ನೊಂದ ಮಹಿಳಾ ಕ್ರೀಡಾಪಟುಗಳಿಗೆ ರಕ್ಷಣೆ ಒದಗಿಸಬೇಕಾಗಿದ್ದ ಬಿಜೆಪಿ ನೇತೃತ್ವದ ಸರ್ಕಾರ ತನ್ನ ಪೊಲೀಸ್ ಪಡೆಗಳನ್ನು ಬಳಸಿ ,ನ್ಯಾಯಕ್ಕಾಗಿ ಪ್ರತಿಭಟಿಸುತ್ತಿರುವ ಕ್ರೀಡಾಪಟುಗಳ ಮೇಲೆ ದಮನಕಾರಿ ಕ್ರಮಗಳನ್ನು ಅನುಸರಿಸುತ್ತಿದೆ. ಮೊನ್ನೆಯಷ್ಟೇ ದೆಹಲಿ ಪೊಲೀಸರು ಕುಡಿದು ಬಂದು ಪ್ರತಿಭಟನಾ ಕಾರರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಇಷ್ಟೆಲ್ಲಾ ಕಿರುಕುಳ ಗಳ ಮಧ್ಯೆಯೂ ನ್ಯಾಯ ಸಿಗುವ ತನಕ ಹೋರಾಟ ನಿಲ್ಲಿಸುವುದಿಲ್ಲ ಎಂದು ಪ್ರತಿಭಟಿಸುತ್ತಿರುವುದು ಅತ್ಯಂತ ಪ್ರಶಂಸನೀಯ ಹಾಗೂ ಅಭಿನಂದನಾರ್ಹವಾಗಿದೆ.
ಲೈಂಗಿಕ ಕಿರುಕುಳ ಹಾಗೂ ಹಿಂಸೆ ಕೊನೆಗಾಣಬೇಕು ಇದಕ್ಕಾಗಿ ದೇಶದ ಎಲ್ಲಾ ನಾಗರಿಕರು ಈ ಪ್ರತಿಭಟನೆಯನ್ನು ಬೆಂಬಲಿಸಬೇಕು . ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ನಮ್ಮ ದೇಶಕ್ಕೆ ಕೀರ್ತಿ ತಂದವರ ಮೇಲೆ ಇಷ್ಟು ಕಿರುಕುಳ ಆದರೆ ಇನ್ನು ಸಾಮಾನ್ಯ ಮಹಿಳೆಯರ ಹಾಗೂ ಹೆಣ್ಣು ಮಕ್ಕಳ ಸುರಕ್ಷತೆ ಕೇಳುವುದು ಹೇಗೆ ಎಂಬ ಪ್ರಶ್ನೆ ಯನ್ನು ನಾವೆಲ್ಲರೂ ಹಾಕಿಕೊಳ್ಳಬೇಕಾಗುತ್ತದೆ.
ದೇಶಕ್ಕೆ ಕೀರ್ತಿ ತರುವ ಸಾಮಾರ್ಥ್ಯ ದ ಕ್ರೀಡಾಪಟುಗಳ ಆತ್ಮ ಸ್ಥೈರ್ಯ ಕುಂದಿಸುವ ಕೆಲಸವನ್ನು ಈ ಕೂಡಲೇ ಬಿಜೆಪಿ ಸರ್ಕಾರ ನಿಲ್ಲಿಸಬೇಕು ಅಗ್ರಹಿಸಲಾಯಿತು. ಜನವಾದಿ ಮಹಿಳಾ ಸಂಘಟನೆಯ ಟಿ.ಆರ್ ಕಲ್ಪನಾ, ಬಿ,ಉಮೇಶ್,ಕೆಪಿಆರ್ ಎಸ್ ನ ಜಿಲ್ಲಾಧ್ಯಕ್ಷ ಚÀನ್ನಬಸವಣ್ಣ, ಎನ್.ಕೆ.ಸುಬ್ರಮಣ್ಯ ಸಮಾಜಿಕ ಹೋರಾಟಗಾರ ಚಂದ್ರು ಮತಾನಾಡಿದರು.
.ಈ ಪ್ರತಿಭಟನೆಯಲ್ಲಿ ಕೆಪಿಆರ್ ಎಸ್ ನ ಸಿ.ಅಜ್ಜಪ್ಪ,ದೂಡ್ಡನಂಜಪ್ಪ,ಗಾಯತ್ರಿ, ರಾಜಮ್ಮ ಪವಿತ್ರ, ಲಕ್ಷಮ್ಮ ಸಾದಿಕ್,ರಫೀಕ್,ಲಕ್ಷಿö್ಮಕಾಂತ್,ಬಸವರಾಜು,ವೇAಕಟೇಶ್, ಸಿದ್ದಯ್ಯ,,ನಾಗರತ್ನ, ಮುಂತಾದವರು ಭಾಗವಹಿಸಿದ್ದರು
ಲೈಂಗಿಕ ಕಿರುಕುಳದ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ
Leave a comment
Leave a comment