ಪಿ.ಎಂ. ವಿಶ್ವಕರ್ಮ ಪ್ರಮಾಣ ಪತ್ರ, ಐ.ಡಿ.ಕಾರ್ಡ್, ಕೌಶಲ್ಯಾಭಿವೃದ್ಧಿ, ಉಪಕರಣಗಳಿಗೆ ಪ್ರೋತ್ಸಾಹ, ಕ್ರೆಡಿಟ್ ಸೌಲಭ್ಯ, ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ, ಮಾರುಕಟ್ಟೆ ಬೆಂಬಲ ಸೌಲಭ್ಯವನ್ನು ನೀಡಲಾಗುವುದು.
ಬಡಗಿತನ, ದೋಣಿ ತಯಾರಿಕೆ, ಶಸ್ತ್ರಾಸ್ತ್ರ ತಯಾರಿಕೆ, ಕಮ್ಮಾರ, ಸುತ್ತಿಗೆ ಮತ್ತು ಟೂಲ್ ಕಿಟ್ ತಯಾರಿಕೆ, ಬೀಗ ತಯಾರಕರು, ಶಿಲ್ಪಕಲೆ/ಕಲ್ಲುಪುಡಿ ಮಾಡುವವರು, ಬಂಗಾರದ ಆಭರಣ ತಯಾರಿಕೆ (ಅಕ್ಕಸಾಲಿಗರು), ಕುಂಬಾರಿಕೆ, ಪಾದರಕ್ಷೆ/ಚರ್ಮಗಾರಿಕೆ ತಯಾರಿಕೆ, ಗಾರೆ ಕೆಲಸಗಾರರು, ಪೊರಕೆ/ಬಾಸ್ಕೆಟ್/ಮ್ಯಾಟ್/ಬಿದಿರಿನ ಉತ್ಪನ್ನ ತಯಾರಿಕೆ/ತೆಂಗಿನ ನಾರಿನ ಉತ್ಪನ್ನ ತಯಾರಕರು, ಗೊಂಬೆ ತಯಾರಕರು, ಕ್ಷೌರಿಕ, ಹೂ-ಮಾಲೆ ತಯಾರಕರು, ಧೋಬಿ, ಟೈಲರ್, ಮೀನಿನ ಬಲೆಗಳನ್ನು ತಯಾರಿಸುವ ಚಟುವಟಿಕೆಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (ಅSಅ)ದಲ್ಲಿ ನೋಂದಣಿ ಮಾಡಿಕೊಳ್ಳಲು ಅವರು ತಿಳಿಸಿದ್ದಾರೆ.
ಕುಶಲಕರ್ಮಿಗಳು ಮೇಲ್ಕಂಡ ೧೮ ವೃತ್ತಿಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ವಯಂ ಉದ್ಯೋಗಿಯಾಗಿರಬೇಕು, ೧೮ ವರ್ಷ ಮೇಲ್ಪಟ್ಟವರಾಗಿರಬೇಕು, ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರು ಮಾತ್ರ ನೋಂದಣಿಗೆ ಅರ್ಹರು (ಕುಟುಂಬ ಅಂದರೆ: ಗಂಡ, ಹೆಂಡತಿ ಮತ್ತು ಮದುವೆಯಾಗದ ಮಕ್ಕಳು), ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿರಬಾರದು, ಕುಶಲಕರ್ಮಿಗಳು ಮುದ್ರಾ ಮತ್ತು ಸ್ವ-ನಿಧಿ ಸಾಲಗಳನ್ನು ಹೊರತುಪಡಿಸಿ ಬೇರೆ ಯಾವುದೇ ತರಹ ಸಾಲವನ್ನು ಪಡೆದಿರಬಾರದು.
ಕುಶಲಕರ್ಮಿಗಳಿಗೆ ನೋಂದಣಿಯಾದ ನಂತರ ಜಿಲ್ಲಾ ಮಟ್ಟದ ಸಮಿತಿಯಿಂದ ಕುಶಲಕರ್ಮಿ ಎಂದು ದೃಢೀಕರಿಸಿದ ನಂತರ ೫ ರಿಂದ ೭ ದಿನಗಳ ಕಾಲ ತರಬೇತಿಯನ್ನು ನೀಡಲಾಗುವುದು. ತರಬೇತಿ ಅವಧಿಯಲ್ಲಿ ಸ್ಟೈಫಂಡ್ ಮತ್ತು ಇತರೇ ಭತ್ಯೆ ನೀಡಲಾಗುವುದು. ತರಬೇತಿಯ ನಂತರ ಪ್ರಮಾಣ ಪತ್ರದೊಂದಿಗೆ ರೂ.೧೫,೦೦೦ ಬೆಲೆಬಾಳುವ ಉಪಕರಣವನ್ನು ನೀಡಲಾಗುವುದು. ನಂತರ ಶೇ.೫ರ ಬಡ್ಡಿ ದರದಲ್ಲಿ ರೂ.೧,೦೦,೦೦೦ ಗಳನ್ನು ಸಾಲವಾಗಿ ನೀಡಲಾಗುವುದು. ತದನಂತರ ೧೫ ದಿವಸಗಳವರೆಗೆ ಉನ್ನತ ಮಟ್ಟದ ತರಬೇತಿಯನ್ನು ನೀಡಿ ಈಗಾಗಲೇ ಪಡೆದ ರೂ.೧,೦೦,೦೦೦ ಗಳ ಸಾಲ ಮರುಪಾವತಿಯಾದ ನಂತರ ರೂ.೨,೦೦,೦೦೦/- ಗಳ ಸಾಲವನ್ನು ಶೇ.೫ರ ಬಡ್ಡಿ ದರದಲ್ಲಿ ನೀಡಲಾಗುವುದು ಹಾಗೂ ತಾವು ತಯಾರಿಸಲ್ಪಡುವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸಲಾಗುವುದು.