ರೈತರಿಗೆ ಶೇಕಡಾ ೪೫ರಷ್ಟು ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಜುಲೈ ೨೦೨೩ರ ಅಂತ್ಯಕ್ಕೆ ಹಿಪ್ಪುನೇರಳೆ ವಿಸ್ತೀರ್ಣ ೬೨೨೬.೭೬ ಹೆಕ್ಟೇರ್ ಇದ್ದು, ೧೦೪೯೮ ರೇಷ್ಮೆ ಬೆಳೆಗಾರರು ರೇಷ್ಮೆ ಕೃಷಿಯನ್ನು ಅವಲಂಬಿತರಾಗಿದ್ದಾರೆ ಎಂದು ರೇಷ್ಮೆ ಇಲಾಖೆ ಉಪನಿರ್ದೇಶಕರು ತಿಳಿಸಿದರು.
ಜಿಲ್ಲೆಯಲ್ಲಿ ರಾಜ್ಯದಲ್ಲಿ ಬೆಳೆಯುವ ಎಲ್ಲಾ ತಳಿಯ ರೇಷ್ಮೆ ಗೂಡುಗಳನ್ನು ಬೆಳೆಯಲಾಗುತ್ತಿದೆ. ಕುಣಿಗಲ್ ತಾಲ್ಲೂಕು ಮತ್ತು ಹೆಬ್ಬೂರು ಹೋಬಳಿಯಲ್ಲಿ ಸಾಂಪ್ರದಾಯಕ ಶುದ್ದ ಮೈಸೂರು ತಳಿ ಬಿತ್ತನೆ ಗೂಡು ಹಾಗೂ ತಿಪಟೂರು, ತುರುವೇಕೆರೆ ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕುಗಳಲ್ಲಿ ಶುದ್ದ ದ್ವಿತಳಿ ಬಿತ್ತನೆ ಗೂಡನ್ನು ಬೆಳೆಯಲಾಗುತ್ತಿದೆ. ಉಳಿದ ೬ ತಾಲ್ಲೂಕುಗಳಾದ ಪಾವಗಡ, ಮಧುಗಿರಿ, ಶಿರಾ, ಕೊರಟಗೆರೆ, ತುಮಕೂರು ಹಾಗೂ ಗುಬ್ಬಿ ಇಲ್ಲಿ ದ್ವಿತಳಿ ಸಂಕರಣ ಹಾಗೂ ಮಿಶ್ರತಳಿ ಗೂಡುಗಳನ್ನು ಉತ್ಪಾದಿಸಲಾಗುತ್ತಿದೆ ಎಂದರಲ್ಲದೆ, ರಾಜ್ಯದಲ್ಲಿಯೇ ದ್ವಿತಳಿ ಗೂಡು ಉತ್ಪಾದನೆಯಲ್ಲಿ ತುಮಕೂರು ಜಿಲ್ಲೆಯು ಎರಡನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ೧೦ ಸಂಚಾರಿ ಪಶು ಚಿಕಿತ್ಸಾಲಯ ವಾಹನಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ದಿನ ಹೈನುಗಾರಿಕೆಯಿಂದ ಜಿಲ್ಲೆಯಲ್ಲಿ ೬ ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ರೈತರಿಗೆ ರಾಸುಗಳ ಮೇವಿಗಾಗಿ ಮೇವಿನ ಬೀಜದ ಕಿರುಪೊಟ್ಟಣಗಳನ್ನು ವಿತರಿಸಲಾಗುವುದು. ರೈತರಿಗೆ ಅಧ್ಯಯನ ಪ್ರವಾಸವನ್ನು ಏರ್ಪಡಿಸಲಾಗುವುದು. ಕುರಿ ಮತ್ತು ಮೇಕೆಗಳಿಗೆ ಕರುಳುಬೇನೆ ರೋಗವನ್ನು ನಿಯಂತ್ರಿಸುವ ಸಲುವಾಗಿ ಒಂದು ವರ್ಷದಲ್ಲಿ ಎರಡು ಬಾರಿ ಲಸಿಕೆಯನ್ನು ಹಾಕಲಾಗುವುದು ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ: ಗಿರೀಶ್ ಬಾಬು ರೆಡ್ಡಿ ಅವರು ಸಭೆಗೆ ಮಾಹಿತಿ ನೀಡಿದರು.
ಶಿಕ್ಷಣ ಇಲಾಖೆಯು ಜಿಲ್ಲೆಯ ಎಲ್ಲಾ ಮಕ್ಕಳಿಗೆ ಸೌಲಭ್ಯಗಳನ್ನು ನೀಡುವುದರ ಜೊತೆಗೆ ಅವರಿಗೆ ಕಲಿಕಾ ಗುಣಮಟ್ಟವನ್ನು ಹೆಚ್ಚಿಸುವುದಕ್ಕೆ ಕ್ರಮ ವಹಿಸಬೇಕೆಂದು ಎರಡು ವಿಭಾಗಗಳ ಡಿಡಿಪಿಐ ಅವರುಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕ್ರೆöÊಸ್ ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಡಾ: ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ನಿರ್ವಹಣೆಗೆಂದು ೧ ಲಕ್ಷ ರೂ. ಅನುದಾನವನ್ನು ನೀಡಲಾಗುತ್ತಿದ್ದು, ಸದರಿ ಕಾರ್ಯಕ್ರಮವನ್ನು ಮುಂದುವರೆಸುವAತೆ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಹೇಳಿದರು. ಇದಕ್ಕೆ ಪತ್ರಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಒಂದು ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಿ, ಇದರ ಕುರಿತು ಸಚಿವರು ಮತ್ತು ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.
ತುಮಕೂರು ನಗರಕ್ಕೆ ಹೆಚ್ಚುವರಿಯಾಗಿ ೫ ಮೆಟ್ರಿಕ್ ನಂತರದ ವಸತಿ ನಿಲಯಗಳನ್ನು ಪ್ರಾರಂಭಿಸಿದರೂ ಮಕ್ಕಳು ದಾಖಲಾಗುತ್ತಾರೆ. ಇಲಾಖೆಯಡಿಯಲ್ಲಿ ಹೊರಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಜೂನ್ ಮಾಹೆಯವರೆಗೆ ವೇತನ ಪಾವತಿಸಲಾಗಿದೆ ಎಂದು ಇಲಾಖೆಯ ಜಂಟಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷಿö್ಮ ಯೋಜನೆಯಡಿಯಲ್ಲಿ ಜಿಲ್ಲೆಯ ೫,೬೫,೧೫೪ ಫಲಾನುಭವಿಗಳು ನೋಂದಾಯಿಸಿಕೊAಡಿದ್ದಾರೆ. ಈ ಯೋಜನೆಗೆ ಆಗಸ್ಟ್ ೩೦ರಂದು ಮುಖ್ಯಮಂತ್ರಿಗಳು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಆ ಕಾರ್ಯಕ್ರಮದ ನೇರಪ್ರಸಾರವನ್ನು ಜಿಲ್ಲೆಯ ೩೬೯ ಕಡೆಗಳಲ್ಲಿ ಎಲ್.ಇ.ಡಿ ಪರದೆ ಹಾಗೂ ಟಿ.ವಿ.ಗಳ ಮೂಲಕ ಸಾರ್ವಜನಿಕರು ವೀಕ್ಷಣೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಸಭೆಗೆ ಮಾಹಿತಿ ನೀಡಿದರು.
ಅನ್ನಭಾಗ್ಯ ಯೋಜನೆ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯ ಎಲ್ಲಾ ಫಲಾನುಭವಿಗಳಿಗೆ ಅಕ್ಕಿಯ ಜೊತೆಗೆ ಹಣವನ್ನು ಡಿಬಿಟಿ ಮೂಲಕ ನೇರವಾಗಿ ವರ ಖಾತೆಗೆ ಜಮೆ ಮಾಡಬೇಕು. ಯಾವ ಫಲಾನುಭವಿಗಳಿಗೆ ಬ್ಯಾಂಕ್ ಖಾತೆ ಹೊಂದಿರದಿಲ್ಲವೂ ಅವರಿಗೆ ಒಂದು ತಿಂಗಳೊಳಗಾಗಿ ಖಾತೆ ಮಾಡಿಸಿಕೊಡಬೇಕು ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ವಿವಿಧ ಇಲಾಖಾ ಪ್ರಗತಿ ಪರಿಶೀಲನೆ
Leave a comment
Leave a comment