ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ವಿಧಾನಸೌಧ ಚಲೋ : ಸೊಗಡು ಶಿವಣ್ಣ
ತುಮಕೂರು : ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ಸರ್ಕಾರ ಸ್ಥಗಿತಗೊಳಿಸದಿದ್ದರೆ ಮುಂದಿನ ವಿಧಾನಸಭೆ ಅಧಿವೇಶನ ಸಮಯದಲ್ಲಿ ವಿಧಾನಸೌದ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ಹೋರಾಟ ಸಮಿತಿ ನೇತೃತ್ವ ವಹಿಸಿರುವ ಮಾಜಿ ಸಚಿವ ಸೊಗಡು ಶಿವಣ್ಣ ಎಚ್ಚರಿಕೆ ನೀಡಿದ್ದಾರೆ,
ಇಂದು ತುಮಕೂರಿನ ಶ್ರೀ ಮುರುಘರಾಜೇಂದ್ರ ಸಭಾ ಭವನದಲ್ಲಿ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ಸಭೆ ಸೇರಿ, ಮುಂದಿನ ಹೋರಾಟದ ಬಗ್ಗೆ ವಿಸ್ತೃತವಾಗಿ ಚರ್ಚಿಸದ ಸಂಧರ್ಭದಲ್ಲಿ , ಈ ಬಗ್ಗೆ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.
ಕಳೆದ ಮೇ 30 ರಂದು ನಡೆದ ಗೃಹ ಸಚಿವ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ಮನೆ ಮುಂಭಾಗದ ಧರಣಿಗೆ ಆಗಮಿಸಿ, ಬಂಧನಕ್ಕೆ ಒಳಗಾದವರು ಮತ್ತು ಸಹಕರಿಸಿದ ಎಲ್ಲರಿಗೂ ಮಾಜಿ ಸಚಿವ ಸೊಗಡು ಶಿವಣ್ಣ ಧನ್ಯವಾದಗಳನ್ನು ಅರ್ಪಿಸಿದರು.
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ವಿಧಾನಸೌಧ ಚಲೋ : ಸೊಗಡು ಶಿವಣ್ಣ
Leave a comment
Leave a comment