ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಿ-ಜಿಲ್ಲಾಧಿಕಾರಿ
ತುಮಕೂರು(ಕ.ವಾ)ಮೇ.೧೭: ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ-೨೦೦೫ ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯನ್ವಯ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ-೨೦೦೫ ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಸೂಕ್ತ ಸೌಲಭ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.
ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ-೨೦೦೫ರ ಮುಖ್ಯ ಉದ್ದೇಶವು ಮಹಿಳೆಯರ ಹಕ್ಕುಗಳನ್ನು ಪರಿಣಾಮಕಾರಿಯಾಗಿ ರಕ್ಷಿಸಿಸುವುದಾಗಿದೆ, ಕುಟುಂಬದೊಳಗೆ ನಡೆಯುವ ಯಾವುದೇ ದೈಹಿಕ, ಲೈಂಗಿಕ, ಮೌಖಿಕ, ಭಾವನಾತ್ಮಕ ಮತ್ತು ಆರ್ಥಿಕ, ದೌರ್ಜನ್ಯ ಉಂಟಾದಾಗ ನ್ಯಾಯಾಲಯದ ಮುಖಾಂತರ ಮಹಿಳೆಯರಿಗೆ ಆರ್ಥಿಕ ಪರಿಹಾರ, ರಕ್ಷಣಾ ಆದೇಶ, ವಾಸದ ಆದೇಶ, ಮಕ್ಕಳ ವಶ, ತಾತ್ಕಾಲಿಕ ಆಶ್ರಯ, ವೈದ್ಯಕೀಯ ಹಾಗೂ ಕಾನೂನು ಮೊದಲಾದ ಅವಶ್ಯಕ ನೆರವನ್ನು ಒದಗಿಸಲಾಗುತ್ತಿದೆ, ಸಾಂತ್ವನ ಕೇಂದ್ರಗಳಲ್ಲಿ ನೊಂದ ಮಹಿಳೆಯರಿಗೆ ಉಚಿತ ಕಾನೂನು ಸೇವೆ, ಕೌಟುಂಬಿಕ ಸಲಹೆ, ಆಪ್ತ ಸಮಾಲೋಚನೆ ಹಾಗೂ ಅಲ್ಪಾವಧಿ ಪುನರ್ವಸತಿಯನ್ನು ನೀಡಲಾಗುತ್ತಿದೆ ಎಂದರು.
ಕೌಟುAಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಸಾಂತ್ವನ ಕೇಂದ್ರಗಳಲ್ಲಿ ಬಾಕಿ ಇರುವ ೪೧ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಸರ್ಕಾರೇತರ ಸಂಸ್ಥೆಗಳು, ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯರ ಸಂರಕ್ಷಣೆಗಾಗಿ ಇರುವ ಕಾನೂನುಗಳ ಬಗ್ಗೆ ಮಾಹಿತಿ ನೀಡಿ, ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ ಮಾತನಾಡಿ ಜನವರಿ ೨೦೨೩ ರಿಂದ ಮಾರ್ಚ-೨೦೨೩ರವರಗೆ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಸ್ವಾಂತನ ಕೇಂದ್ರಗಳಲ್ಲಿ ೩೭೩ ಪ್ರಕರಣಗಳು ದಾಖಲಾಗಿದ್ದು, ೩೬೧ ಪ್ರಕರಣಗಳು ಇತ್ಯರ್ಥವಾಗಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ನೂರುನ್ನೀಸ ಮಾತನಾಡಿ ಮಹಿಳೆಯ ಸಂರಕ್ಷಣಾ ಕಾಯ್ದೆ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು
List Your Business Online adsquicks
Promote Your Business Online adsquicks