ತುಮಕೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ನ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು ಭಾನುವಾರ ಕುಟುಂಬ ಸಮೇತರಾಗಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಶ್ರೀಮಠದ ಸಿದ್ಧಲಿಂಗಸ್ವಾಮೀಜಿಗಳ ದರ್ಶನ ಮಾಡಿ ಆಶೀರ್ವಾದ ಪಡೆದರು.
ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಡಿ.ಟಿ.ಶ್ರೀನಿವಾಸ್, ತುಮಕೂರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಆರಂಭಿಸುವ ಮೊದಲು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದಿದ್ದೆ, ಈಗ ಚುನಾವಣೆ ಸಮೀಪದಲ್ಲಿ ಶ್ರೀಗಳು ನನಗೆ ಗೆಲುವಾಗಲಿ ಎಂದು ಆಶೀರ್ವಾದ ಮಾಡಿದ್ದಾರೆ ಎಂದರು.
ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ತಮಗೆ ಅರಿವಿದೆ. ಈ ಎಲ್ಲಾ ಸಮಸ್ಯೆಗಳ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸಿ ಬಗೆಹರಿಸುವುದಾಗಿ ಹೇಳಿದ ಅವರು, ಆಗ್ನೇಯ ಶಿಕ್ಷಕರ ಕ್ಷೇತ್ರದೆಲ್ಲೆಡೆ ಪ್ರವಾಸ ಮಾಡಿ, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದ್ದೇನೆ, ಎಲ್ಲೆಡೆ ಉತ್ತಮ ಬೆಂಬಲ ಸಿಕ್ಕಿದೆ, ಈ ಚುನಾವಣೆಯಲ್ಲಿ ತಮ್ಮ ಗೆಲುವು ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಡಿ.ಟಿ.ಶ್ರೀನಿವಾಸ್ ಅವರ ಪತ್ನಿ, ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಒಲವು ಕಂಡುಬoದಿದೆ. ತಮ್ಮ ಪತಿ ಶ್ರೀನಿವಾಸ್ ಅವರು ಈ ಬಾರಿ ಜಯಗಳಿಸುತ್ತಾರೆ ಎಂದರು.
ತಾವು ಬಿಜೆಪಿಯಿಂದ ಶಾಸಕಿಯಾಗಿದ್ದಾಗ ತಮ್ಮ ತಿ ಶ್ರೀನಿವಾಸ್ ಪಕ್ಷೇತ್ರರಾಗಿ ಸ್ಪರ್ಧೆ ಮಾಡಿದ್ದಾಗ ತಾವು ಪತಿಯನ್ನು ಬೆಂಬಲಿಸದೆ, ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡಿ ಪಕ್ಷನಿಷ್ಠೆ ತೋರಿಸಿದ್ದೆ ಎಂದು ತಮ್ಮನ್ನು ಟೀಕಿಸಿದ್ದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು. ತಾವು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದು, ಬೇರೆ ಪಕ್ಷ ಸೇರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪರಾಧವಲ್ಲ. ಆ ಪಕ್ಷದಲ್ಲಿದ್ದಾಗ ಪಕ್ಷಕ್ಕೆ ದ್ರೋಹ ಮಾಡದೆ ಶಾಸಕಿಯಾಗಿ ಪ್ರಮಾಣಿಕ ಕೆಲಸ ಮಾಡಿದ್ದೆ. ಈಗ ಕಾಂಗ್ರೆಸ್ ಸೇರಿ ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.
ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಮಾತನಾಡಿ, ಶಿಕ್ಷಣ ಕ್ಷೇತ್ರವನ್ನು ಚೆನ್ನಾಗಿ ಬಲ್ಲವರಾದ, ಸಮರ್ಥ, ದಕ್ಷ ಅಭ್ಯರ್ಥಿಯಾಗಿ ಡಿ.ಟಿ.ಶ್ರೀನಿವಾಸ್ ಅವರಿಗೆ ಕಾಂಗ್ರೆಸ್ ಪಕ್ಷ ಈ ಚುನಾವಣೆಯಲ್ಲಿ ಅವಕಾಶ ಮಾಡಿಕೊಟ್ಟಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಪಕ್ಷೇತ್ರರಾಗಿ ಸ್ಪರ್ಧಿಸಿದ್ದ ಶ್ರೀನಿವಾಸ್ ಅವರು ಗೆಲುವಿನ ಸಮೀಪ ಬಂದು ಪರಾಭವಗೊಂಡಿದ್ದರು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ಬಲದೊಂದಿಗೆ ಪಕ್ಷದ ಬಲವೂ ಸೇರಿ ಶ್ರೀನಿವಾಸ್ ಅವರು ಗೆಲುವು ಪಡೆಯುವುದು ಶತಸಿದ್ಧ ಎಂದರು.
ಈ ಕ್ಷೇತ್ರದಲ್ಲಿ ಮೂರು ಬಾರಿ ಆಯ್ಕೆಯಾಗಿದ್ದ ಬಿಜೆಪಿ ಅಭ್ಯರ್ಥಿ ಸದಾ ಬೆಂಗಳೂರಿನಲ್ಲೇ ಇರುತ್ತಾರೆ. ಕ್ಷೇತ್ರದಲ್ಲಿ ಕಾಣುವುದೇಯಿಲ್ಲ. ಶಿಕ್ಷಕರ ಸಮಸ್ಯೆ ಕೇಳುತ್ತಿಲ್ಲ, ಶಾಲೆ, ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಅವರ ತೊಂದರೆ ಏನು ಎಂಬುದನ್ನು ವಿಚಾರಿಸಿಲ್ಲ, ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ ಎಂದು ಹೇಳಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ಧಗಂಗಾ ಮಠಕ್ಕೆ ಭೇಟಿ
Leave a comment
Leave a comment