ತುಮಕೂರು:ರಾಜ್ಯ ಸರಕಾರ ಶುಕ್ರವಾರ ಮಂಡಿಸಲಿರುವ ಬಜೆಟ್ನಲ್ಲಿ ಕೊಬ್ಬರಿಗೆ ಮೂರು ಸಾವಿರ ರೂಗಳ ಪ್ರೋತ್ಸಾಹ ಧನ ಪ್ರಕಟಿಸುವ ಮೂಲಕ ನಾವು ರೈತರ ಪರ ಎಂಬುದನ್ನು ಕೇವಲ ಹೇಳಿಕೆಗಳ ಮೂಲಕ ಅಲ್ಲ. ದಾಖಲೆಗಳ ಸಮೇತ ಸಾಭೀತು ಪಡಿಸುವಂತೆ ರೈತ ಮುಖಂಡ ಕೆ.ಟಿ.ಶಾಂತಕುಮಾರ್ ಒತ್ತಾಯಿಸಿದ್ದಾರೆ.
ನಗರದಲ್ಲಿ ಕೊಬ್ಬರಿಗೆ ಕ್ವಿಂಟಾಲ್ಗೆ 15 ಸಾವಿರ ಬೆಂಬಲ ಬೆಲೆಗೆ ಆಗ್ರಹಿಸಿ ರೈತ ಸಂಘ ಮತ್ತು ಹಸಿರುವ ಆಯೋಜಿಸಿರುವ ತುಮಕೂರು ಬಂದ್ ಹಿನ್ನೆಲೆಯಲ್ಲಿ ನಡೆದ ಮೆರವಣಿಗೆಯಲ್ಲಿ ಪಾಲ್ಗೊಂಡು ಟೌನ್ಹಾಲ್ ಬಳಿ ಮಾತನಾಡಿದ ಅವರು,ರಾಜ್ಯ ಸರಕಾರ ನೀಡುತ್ತಿರವು 1500 ರೂಗಳಿಗೆ ಹೆಚ್ಚುವರಿಯಾಗಿ ಅಷ್ಟೇ ಹಣವನ್ನು ಪ್ರೋತ್ಸಾಹಧನವಾಗಿ ಘೋಷಿಸುವ ಮೂಲಕ ಸಂಕಷ್ಟದ ಲ್ಲಿರುವ ಸುಮಾರು 12 ಜಿಲ್ಲೆಗಳ ಕೊಬ್ಬರಿ ಬೆಳೆಗಾರರ ನೆರವಿಗೆ ಬರಬೇಕೆಂದರು.
ಕೇoದ್ರದ ಅನುಮೋಧನೆಯಂತೆ ರಾಜ್ಯ ಸರಕಾರ ನ್ಯಾಫೇಡ್ ಮೂಲಕ ಖರೀದಿಸಲು ಹೊರಟಿದ್ದ ಕೊಬ್ಬರಿ ನೊಂದಣಿಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ.ಸರಕಾರದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೇ ಶಾಮೀಲಾಗಿದೆ. ವರ್ತಕರು, ದಲ್ಲಾಳಿಗಳು, ಸಾಗಾಟಗಾರರಿಂದ ಕೊಬ್ಬರಿ ಖರೀದಿಸಿ, ಕೇವಲ ನಾಲ್ಕು ದಿನದಲ್ಲಿ ನಿಗಧಿ ಪಡಿಸಿದ 62500 ಮೆ.ಟ.ಖರೀದಿ ಮುಗಿದಿದೆ ಎಂದು ಹೇಳಿದ್ದಾರೆ. ಇದು ಶುದ್ದ ಸುಳ್ಳು,ರೈತರಿಗೆ ಇದರಿಂದ ಯಾವುದೇ ಉಪಯೋಗವಿಲ್ಲ