ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ನವರು ನಮ್ಮ ಕಣ್ಮುಂದೆಯೇ ಒಂದಾಗುತ್ತಿರುವುದು ಕಂಡು ಬರುತ್ತಿದೆ. ನಮಗೆ ಈ ಬಗ್ಗೆ ಆತಂಕವಿಲ್ಲ. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಜನತೆಗೆ ಉತ್ತಮ ಆಡಳಿತ ನೀಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ಗುಂಡೂರಾವ್ ಹೇಳಿದರು,ಸಿಂಗಾಪೂರ್ ರಾಜಕಾರಣದ ಬಗ್ಗೆ ಈಗಾಗಲೇ ನಮ್ಮ ಪಕ್ಷದ ಅಧ್ಯಕ್ಷರು ಮಾತನಾಡಿದ್ದಾರೆ. ಅವರಿಗೆ ವಿಶೇಷ ಮಾಹಿತಿ ಇರಬಹುದು ಎಂದರು.ಜೆಡಿಎಸ್ ಮತ್ತು ಬಿಜೆಪಿಯವರು ನಮ್ಮ ವಿರುದ್ಧ ಷಡ್ಯಂತ್ರ ಮಾಡಲು ಒಂದಾಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇದರಿಂದ ನಮಗೇನು ಆತಂಕವಿಲ್ಲ. ನಮ್ಮ ಪಕ್ಷದ ಸಚಿವರು, ಶಾಸಕರುಗಳು ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದರು.ನಮ್ಮ ಸರ್ಕಾರದ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲಿದೆ. ಇದರಲ್ಲಿ ಯಾವುದೇ ಸಂದೇಹ ಬೇಡ ಎಂದರು.