ತುಮಕೂರು:ಗ್ರಾಮ ಅಡಳಿತಾಧಿಕಾರಿಗಳ ಮೇಲಿನ ಕಾರ್ಯ ಒತ್ತಡ ಕಡಿಮೆ ಮಾಡಬೇಕು,ಅಗತ್ಯ ಮೂಲಭೂತ ಸೌಕರ್ಯ,ತರಬೇತಿ ನೀಡುವಂತೆ ಕೋರಿ ಇಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ(ರಿ).ತುಮಕೂರು ಜಿಲ್ಲಾ ಶಾಖೆವತಿಯಿಂದ ಕಂದಾಯ ಸಚಿವರು,ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರುಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಜಿಲ್ಲಾ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು ಮತ್ತು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ದೇವರಾಜು ಅವರ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಗ್ರಾಮ ಆಡಳಿತಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ನಮ್ಮ ಮನವಿಗೆ ಸ್ಪಂದಿಸುವoತೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ದೇವರಾಜು, ಸರಕಾರ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ರೈತರೊಂದಿಗೆ ನೇರ ಸಂಪರ್ಕದಲ್ಲಿ ಕೆಲಸ ಮಾಡುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಯಾವುದೇ ಮೂಲಭೂತ ಸೌಕರ್ಯ ಒದಗಿಸದೆ ಮೊಬೈಲ್ ಅಫ್ ಮೂಲಕ ಲ್ಯಾಂಡ್ ಬಿಟ್ ಕೆಲಸ ಮಾಡಲು ಗುರಿ ನಿಗಧಿ ಪಡಿಸಿದ್ದಾರೆ.ಅಲ್ಲದೆ ರಜಾ ದಿನಗಳಲ್ಲಿಯೂ ಕಾರ್ಯನಿರ್ವಹಿಸುವಂತೆ ಒತ್ತಡ ಹೇರಲಾಗುತ್ತಿದೆ.ಇದರಿಂದ ಗ್ರಾಮ ಆಡಳಿತ ಅಧಿಕಾರಿಗಳ ಮಾನಸಿಕ ಒತ್ತಡ ಹೆಚ್ಚಾಗುತ್ತಿದ್ದು,ಇದೇ ರೀತಿ ಕೆಲಸದ ಒತ್ತಡದಿಂದ ಕಲ್ಬುರ್ಗಿಯಲ್ಲಿ ಓರ್ವ ಗ್ರಾಮ ಆಡಳಿತ ಅಧಿಕಾರಿ ಹೃದಯಾಘಾತಕ್ಕೆ ಒಳಗಾಗಿದ್ದು, ಹಲವಾರು ರೋಗಗಳಿಗೆ ತುತ್ತಾಗುತಿದ್ದಾರೆ.ಹಾಗಾಗಿ ಲ್ಯಾಡ್ಬೀಟ್ಗೆ ಅಗತ್ಯವಿರುವ ಮೂಲಭೂತ ಸೌಕರ್ಯ ಒದಗಿಸಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು.
ಗ್ರಾಮ ಅಡಳಿತಾಧಿಕಾರಿಗಳ ಮೇಲಿನ ಕಾರ್ಯ ಒತ್ತಡ ಕಡಿಮೆ ಮಾಡಬೇಕು
Leave a comment
Leave a comment