ತುಮಕೂರು : ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿಂದು ಎಸ್.ಎಸ್.ಐ.ಟಿ, ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಎ.ಡಬ್ಲೂö್ಯ.ಒ (ಆರ್ಮ್ಸ ವೈಡ್ ಒಪನ್) ಅವರ ಸಹಯೋಗದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಯಿತು.
ಪ್ರತಿವರ್ಷ ಜೂನ್ ೧೪ ರಂದು ವಿಶ್ವ ರಕ್ತದಾನಿ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಅಂಗವಾಗಿ ಕಾಲೇಜಿನಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಕಾಲೇಜಿನ ವಿದ್ಯಾರ್ಥಿಗಳ ರಕ್ತದಾನದ ಮಹತ್ವವನ್ನು ತಿಳಿದು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿ, ಜೀವ ಉಳಿಸಲು ನೇರವಾದರು. ಶಿಬಿರದಲ್ಲಿ ಒಟ್ಟು ೭೨ಯೂನಿಟ್ ರಕ್ತ ಸಂಗ್ರಹವಾಯಿತು.
ರಕ್ತದಾನ ಶಿಬಿರದಲ್ಲಿ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್ ರವಿಪ್ರಕಾಶ್, ಡಾ.ರವಿಕಿರಣ್, ಡಾ.ರಾಜೇಂದ್ರ ಪ್ರಸಾದ್, ಜಾನ್ ಕೆಲ್ವಿನ್ ಮತ್ತು ಜೀವಿತ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಆರ್ಮ್ಸ ವೈಡ್ ಒಪನ್ ಅವರ ಸಹಯೋಗದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ

Leave a comment
Leave a comment


