ಜೂನ್ ೫ರಂದು ವಿಶ್ವ ಪರಿಸರ ದಿನಾಚರಣೆ
ತುಮಕೂರು (ಕ.ವಾ.) ಜೂ.೩ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ಸ್ನಾತಕೋತ್ತರ ಪರಿಸರ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ತುಮಕೂರು ವಿಶ್ವವಿದ್ಯಾಲಯ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಜೂನ್ ೫ರಂದು ಬೆಳಿಗ್ಗೆ ೧೦ ಗಂಟೆಗೆ ತುಮಕೂರು ವಿ.ವಿ.ಯ ವಿಜ್ಞಾನ ಕಾಲೇಜಿನ ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ “ವಿಶ್ವ ಪರಿಸರ ದಿನಾಚರಣೆ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ. ವಿದ್ಯಾಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ಕುಮಾರ್ ಶಹಪೂರ್ವಾಡ್, ನ್ಯಾಯಾಧೀಶರು, ತುಮಕೂರು ವಿ.ವಿ ಕುಲಪತಿ, ವಕೀಲ ಸಂಘದ ಅಧ್ಯಕ್ಷರು, ಇಲಾಖೆಯ ಅಧಿಖಾರಿಗಳು, ಶಾಲಾ/ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಬಿ.ಸಿ ಶಿವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದರು.
ವಿಶ್ವ ಪರಿಸರ ದಿನಾಚರಣೆ,ತುಮಕೂರು
Leave a comment
Leave a comment