ತುಮಕೂರು- ನಗರದಲ್ಲಿ ವಿಶ್ವ ಮಲೇರಿಯಾ ದಿನ, ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಯೋಗದಲ್ಲಿ ಜನರಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜಾಥಾ ನಡೆಸಲಾಯಿತು.

ಇಲ್ಲಿನ ಮಹಾನಗರ ಪಾಲಿಕೆ ಆವರಣದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯವರೆಗೆ ನಡೆದ ಮಲೇರಿಯಾ ಜನಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಡಿಹೆಚ್ಓ ಮಂಜುನಾಥ್ ಅವರು, ಮಲೇರಿಯಾ ಮಾಸಾಚರಣೆ, ಡೆಂಗ್ಯೂ ದಿನಾಚರಣೆ ಹಾಗೂ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಜನಜಾಗೃತಿ ಜಾಥಾ ನಡೆಸಲಾಗುತ್ತಿದೆ. ಮಲೇರಿಯಾ ಪರಾವಲಂಬಿ ಅಣುವಿನಿಂದ ಹರಡುತ್ತದೆ. ಜತೆಗೆ ಸೊಳ್ಳೆಗಳಿಂದಲೂ ಮಲೇರಿಯಾ ಬರುತ್ತದೆ. ಇವುಗಳಿಂದ ೪ ವಿಧದ ಮಲೇರಿಯಾ ಹರಡುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.
ಮಳೆಗಾಲದಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗಿ ಮನುಷ್ಯನನ್ನು ಕಚ್ಚಿ ಈ ಕಾಯಿಲೆ ಹರಡುವ ಸಾಧ್ಯತೆ ಹೆಚ್ಚಾಗಿದೆ. ಮಾನ್ಸೂನ್ ಮಳೆಗಾಲದಲ್ಲಿ ಮನೆಯ ಅಕ್ಕಪಕ್ಕದ ಸೇರಿದಂತೆ ಪರಿಸರದಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಂಡರೆ ಮಲೇರಿಯಾ ಮತ್ತು ಡೆಂಗ್ಯೂ ಹರಡುವುದನ್ನು ತಡೆಯಬಹುದು ಎಂದು ಸಲಹೆ ನೀಡಿದರು.
ಮನೆಗಳಲ್ಲಿ ರಾತ್ರಿ ವೇಳೆ ಸೊಳ್ಳೆ ಪರದೆ ಬಳಕೆ ಮಾಡಬೇಕು ಹಾಗೂ ಮನೆಯ ಸುತ್ತಮುತ್ತ ಕೀಟನಾಶಕಗಳ ಸಿಂಪಡಣೆಯಿAದ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಬಹುದು. ಈ ಬಗ್ಗೆ ಎಲ್ಲರೂ ಜಾಗರೂಕತೆಯಿಂದ ಇರುವಂತೆ ಅವರು ಮನವಿ ಮಾಡಿದರು.
ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಬಿ.ಎಂ. ಚಂದ್ರಶೇಖರ್ ಮಾತನಾಡಿ, ಮಲೇರಿಯಾ ದಿನ ಮತ್ತು ಡೆಂಗ್ಯೂ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮಲೇರಿಯಾ ಮತ್ತು ಡೆಂಗ್ಯೂ ಹರದಡಂತೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಾಗೃತಿ ಜಾಥಾ ನಡೆಸಲಾಗುತ್ತಿದೆ. ಜನ ಮಲೇರಿಯಾ ಮತ್ತು ಡೆಂಗ್ಯೂ ಹೇಗೆ ಹರಡುತ್ತದೆ ಎಂಬುದನ್ನು ಅರಿತು ಅದರಿಂದ ಹೇಗೆ ಸುರಕ್ಷಿತವಾಗಿರಬೇಕು ಎಂಬುದರ ಬಗ್ಗೆ ಜಾಥಾ ಮೂಲಕ ತಿಳಿಸಲಾಗುತ್ತಿದೆ ಎಂದರು.
ಈಗ ಮಳೆಗಾಲ ಆಗಿರುವುದರಿಂದ ಪ್ರತಿಯೊಬ್ಬರೂ ತಮ್ಮ ಮನೆಗಳ ಮುಂದೆ ಅಕ್ಕಪಕ್ಕದಲ್ಲಿ ತೆಂಗಿನ ಚಿಪುö್ಪ, ಟೈರ್ ಅಥವಾ ಇನ್ನಿತರೆ ವಸ್ತುಗಳಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಇಂತಹ ವಸ್ತುಗಳಲ್ಲಿ ನೀರು ನಿಂತರೆ ಸೊಳ್ಳೆಗಳು ಉತ್ಪತ್ತಿಯಾಗಿ ಮಲೇರಿಯಾ ಅಥವಾ ಡೆಂಗ್ಯೂ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹಾಗಾಗಿ ಮಲೇರಿಯಾ ಮತ್ತು ಡೆಂಗ್ಯೂ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.