ತುಮಕೂರು ಹಾಲು ಒಕ್ಕೂಟದ ವತಿಯಿಂದ ವಿಶ್ವ ಹಾಲು ದಿನಾಚರಣೆಯ ದಿನವಾದ ಇಂದು ಜಿಲ್ಲಾಸ್ಪತ್ರೆ ರೋಗಿಗಳಿಗೆ ಹಾಲು ವಿತರಿಸುವ ಜತೆಗೆ ಹಾಲಿನ ಮಹತ್ವವನ್ನು ಸಾರುವಂತಹ ಕೆಲಸ ಮಾಡಲಾಗುತ್ತಿದೆ. ಅಪೌಷ್ಠಿಕ ಮಕ್ಕಳಿಗೆ ಹಾಲು ವಿತರಿಸುವ ಕೆಲಸದೊಂದಿಗೆ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ತುಮುಲ್ ಮಾಡುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಡಾ: ಕೆ. ವಿದ್ಯಾಕುಮಾರಿ ತಿಳಿಸಿದರು.
ವಿಶ್ವ ಹಾಲು ದಿನಾಚರಣೆ ಅಂಗವಾಗಿ ತುಮಕೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದ ವತಿಯಿಂದ ನಗರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ನಂದಿನಿಯ ಸುಹಾಸಿತ, ತೃಪ್ತಿ ಹಾಲು, ಕುಕ್ಕೀಸ್ ಬಿಸ್ಕೆಟ್ ವಿತರಿಸಿ ಮಾತನಾಡಿದ ಅವರು, ರೋಗಿಗಳಿಗೆ ಹಾಲನ್ನು ನೀಡುವುದರ ಮೂಲಕ ಅದರ ಮಹತ್ವವನ್ನು ಸಹ ತಿಳಿಸಿದ್ದಾರೆ. ಕೆಎಂಎಫ್ ಮಂಡಳಿಯು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಯತ್ತಾ ಸಾಗುವ ನಿಟ್ಟಿನಲ್ಲಿ ಅಧ್ಯಕ್ಷರು ಹಾಗೂ ನಿರ್ದೇಶಕರು ಕೆಲಸ ಮಾಡಲಿ ಎಂದು ಶುಭ ಹಾರೈಸಿದರು
ಶಾಲಾ ಮಕ್ಕಳಿಗೆ ಹಾಲು ವಿತರಿಸುವ ಕ್ಷೀರಭಾಗ್ಯ ಯೋಜನೆಯಡಿ ಕೆಎಂಎಫ್ನಿAದಲೇ ಹಾಲಿನ ಪುಡಿ ಪಡೆದು ಮಕ್ಕಳಿಗೆ ವಿತರಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿಯೂ ಸಹ ಸರ್ಕಾರದ ನಿರ್ದೇಶನದ ಅನುಸಾರ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ತಾಯಿ ಎದೆ ಹಾಲು ಹೊರತುಪಡಿಸಿದರೆ ನಂದಿನಿ ಹಾಲಿಗೆ ಅಷ್ಟೇ ಪ್ರಾಮುಖ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆ ಯಶಸ್ವಿಯಾಗಿದೆ. ರಾಜ್ಯದಲ್ಲೇ ಒಳ್ಳೆಯ ದರ ಕೊಡುವುದರಲ್ಲಿ ತುಮುಲ್ ಮುಂಚೂಣಿಯಲ್ಲಿದೆ ಎಂದರು.