ಕರ್ನಾಟಕ ವಿಧಾನಸಭಾ ಉಪ ಚುನಾವಣೆಯಲ್ಲಿ ಅತ್ಯಂತ ಕುತೂಹಲ ಕೆರಳಿಸಿದ್ದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಕೊನೆಗೂ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಶಿಗ್ಗಾಂವಿ ಕಾಂಗ್ರೆಸ್ ಟಿಕೆಟ್ಗಾಗಿ ಮುಸ್ಲಿಂ ವರ್ಸಸ್ ಲಿಂಗಾಯತ ನಡುವೆ ಪೈಪೋಟಿ ನಡೆದಿತ್ತು ಆದ್ರೆ ಅಂತಿಮವಾಗಿ ಕಾಂಗ್ರೆಸ್ ಮತ್ತೊಮ್ಮೆ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಿದೆ.ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಇಂದು ಆದೇಶ ಹೊರಡಿಸಿದೆ. ಇದರೊಂದಿಗೆ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಎದುರಾಳಿ ಯಾರು ಅನ್ನೋ ಗೊಂದಲಕ್ಕೆ ತೆರೆ ಬಿದ್ದಿದೆ.
yasir ahmed khan from shiggamvi constituency inc